ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮತ್ತೆ 30ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ವಲ್ಕಂ ದಿನ್ನಿ ಗ್ರಾಮದ 10 ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಶುರುವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮತ್ತೆ 30ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ
ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮತ್ತೆ 30ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ
Follow us
TV9 Web
| Updated By: ಆಯೇಷಾ ಬಾನು

Updated on:Jul 03, 2022 | 7:00 PM

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು(Contaminated Water) ಅವಾಂತರಕ್ಕೆ ಕೊನೆಯೇ ಇಲ್ವಾ? ಕಳೆದ ಬಾರಿ ಕಲುಷಿತ ನೀರು ಸೇವಿಸಿ 7 ಜನ ಸಾವನ್ನಪ್ಪಿದ್ರೂ ರಾಯಚೂರು ಜಿಲ್ಲಾಡಳಿತ ಇನ್ನೂ ಎಚ್ಚೆತ್ತುಕೊಂಡಿಲ್ಲ. ಈಗ ಮತ್ತೆ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ವಲ್ಕಂ ದಿನ್ನಿ ಗ್ರಾಮದ 10 ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಶುರುವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಲ್ಕಂ ದಿನ್ನಿಗೆ ತುಂಗಭದ್ರಾ ನದಿಯಿಂದ ನೀರು ಪೂರೈಸಲಾಗುತ್ತಿತ್ತು.

ವಿಜಯಪುರದಲ್ಲಿ 70ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾತಪುರ ಗ್ರಾಮದಲ್ಲಿ 70ಕ್ಕೂ ಹೆಚ್ಚು ಜನರಲ್ಲಿ ವಾಂತಿ ಭೇದಿ ಕಂಡು ಬಂದಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ 42 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ 40ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಬೆಳಗ್ಗೆಯಿಂದ ಗ್ರಾಮದಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು ಇಂಡಿ ಪಟ್ಟಣದಿಂದ ಪೂರೈಸಿದ ನೀರು ಕುಡಿದು ಜನರು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ಶಾಸಕ ಯಶವಂತರಾಯಗೌಡ ಪಾಟೀಲ್ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ. ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಿಂದ ಕುಡಿಯುವ ನೀರಿನ ಸ್ಯಾಂಪಲ್​ ಸಂಗ್ರಹಿಸಿ ಪರೀಕ್ಷೆಗೆ ರವಾನಿಸಲಾಗಿದೆ.

ಏನಿದು ಕಲುಷಿತ ನೀರಿನ ಘಟನೆ? ಮೇ 31ರಂದು ರಾಯಚೂರಿನ ಇಂದಿರಾ ನಗರದ ನಿವಾಸಿಗಳು ಕಲುಷಿತ ನೀರು ಕುಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಜಿಲ್ಲೆಯ ರಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಇಂದಿರಾನಗರದ ಮಲ್ಲಮ್ಮ (40) ಮೊದಲು ಸಾವನ್ನಪ್ಪಿದ್ದರು. ಕುಡಿಯುವ ನೀರಿಗೆ ಕೆಲವಡೆ ಚರಂಡಿ ನೀರು ಸೇರುತ್ತಿರುವ ಆರೋಪ ಕೇಳಿ ಬರುತ್ತಿದೆ. ಹೀಗಾಗಿ ರಾಯಚೂರು ನಗರದ ಜನತೆ ಆತಂಕ ಹೆಚ್ಚಾಗಿದೆ. ಆಸ್ಪತ್ರೆಗೆ ದಾಖಲಾದವರಲ್ಲಿ ವಾಂತಿ, ಬೇದಿಯಿಂದ ಬಳಲುತ್ತಿದ್ದಾರೆ. ಅಲ್ಲದೆ 20ಕ್ಕೂ ಹೆಚ್ಚಿನ ಪರಿಸ್ಥಿತಿ ಬಿಗಡಾಯಿಸಿದೆ. ಅವರಲ್ಲಿ ಮೂತ್ರಪಿಂಡ ಸಮಸ್ಯೆ ಎದುರಿಸುತ್ತಿರುವ ಹಲವರಿಗೆ ಡಯಾಲಿಸಿಸ್ ಮಾಡಬೇಕಿದೆ. ಕಲುಷಿತ ನೀರು ಕುಡಿದು ಚಿಕ್ಕಮಕ್ಕಳು ಹೆಚ್ಚಾಗಿ ಬಾದಿತರಾಗುತ್ತಿದ್ದಾರೆ. ಈ ಪ್ರಕರಣದಿಂದ ಈಗಾಗಲೆ ನಾಲ್ಕು ಜನರು ಸಾವನ್ನಪ್ಪಿದ್ದು (ಜೂನ್ 8) ರಂದು ​ಅಂದ್ರೂನ್ ಖಿಲ್ಲಾ ನಿವಾಸಿ ಅಬ್ದುಲ್ ಕರೀಂ(50) ಸಾವನ್ನಪ್ಪಿದ್ದರು. ಇಂದು ಮತ್ತೆ 48 ವರ್ಷದ ವರ್ಷದ ಸಾವನ್ನಪ್ಪಿದ್ದಾರೆ. ಒಟ್ಟು ಕಲುಷಿತ ನೀರಿಗೆ ಐದು ಜನರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಅರ್ಚನಾ, ನೀರಿನ ಶುದ್ದೀಕರಣ ಹಾಗು ಸರಬರಾಜು ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಇಬ್ಬರು ಅಧಿಕಾರಿಗಳ ಮೇಲೆ ಕ್ರಮವಾಗಿದೆ. ಉಳಿದವರ ತಪ್ಪಿನ ಬಗ್ಗೆ ಪರಿಶೀಲನೆ ನಡೆದಿದೆ. ಶುದ್ದೀಕರಣ ಘಟಕದಲ್ಲಿನ ಪ್ರಯೋಗಾಲಯ ಎರಡು ತಿಂಗಳಿಂದ ಕಾರ್ಯನಿರ್ವಹಿಸಿಲ್ಲ, ಸಿಬ್ಬಂದಿಯೂ ಇಲ್ಲ. ನೀರು ಶುದ್ದೀಕರಣಕ್ಕೆ ಬೇಕಾದ ಅಗತ್ಯ ರಾಸಾಯನಿಕಗಳನ್ನ ಸಂಗ್ರಹಿಸಿಟ್ಟಿಲ್ಲ. ನಗರದಲ್ಲಿ ನೀರು ಸರಬರಾಜು ಮಾಡುವ ಪೈಪ್ ಲೈನ್ ಬದಲಾಯಿಸುತ್ತಿದ್ದಾರೆ. ಘಟಕದ ಜೊತೆ ಪೈಪ್ ಲೈನ್ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆ ಸದ್ಯ ಪ್ರಸ್ತಾಪವಿಲ್ಲ. ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ನೀರಿನ ಶುದ್ದೀಕರಣ ಹಾಗೂ ಸರಬರಾಜು ವ್ಯವಸ್ಥೆಯ ಲೋಪಗಳನ್ನ ಪರಿಶೀಲಿಸುತ್ತಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ನಗರಸಭೆಗೆ ಸೂಚನೆ ನೀಡುತ್ತಿದ್ದೇವೆ ಎಂದು ಅರ್ಚನಾ ಮಾಹಿತಿ ನೀಡಿದ್ದಾರೆ.

Published On - 5:30 pm, Sun, 3 July 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ