ರಾಯಚೂರು: ಡೆಂಗ್ಯೂಗೆ ಮೂರು ಮಕ್ಕಳು ಬಲಿ; ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗರಾಜ್ ಭೇಟಿ

ಆರೋಗ್ಯ ಇಲಾಖೆ 23 ತಂಡಗಳಿಂದ ಪ್ರತೀ ದಿನ 100 ಮನೆಗಳ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಅಲ್ಲದೇ ಸ್ವಚ್ಛತೆ ಕಾಪಾಡುವಂತೆ ಪುರಸಭೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಜತೆಗೆ ಆರೋಗ್ಯ ಇಲಾಖೆ ಡೆಂಗ್ಯೂ ತಡೆಗಟ್ಟಲು ಜನರ ಸಹಕಾರ ಕೋರಿದೆ.

ರಾಯಚೂರು: ಡೆಂಗ್ಯೂಗೆ ಮೂರು ಮಕ್ಕಳು ಬಲಿ; ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗರಾಜ್ ಭೇಟಿ
ವೈದ್ಯಾಧಿಕಾರಿ ಡಾ. ನಾಗರಾಜ್ ಭೇಟಿ
Follow us
TV9 Web
| Updated By: preethi shettigar

Updated on:Oct 24, 2021 | 1:29 PM

ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ಡಾ.ನಾಗರಾಜ್ ಮಾನ್ವಿ ಪಟ್ಟಣಕ್ಕೆ ಆಗಮಿಸಿದ್ದು, ನಗರದ ವಾರ್ಡ್​ಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವಾರದಲ್ಲಿ 3 ಮಕ್ಕಳು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ತಂಡಗಳನ್ನು ರಚಿಸಿವೆ ಮತ್ತು ಮನೆ ಸರ್ವೆಗೆ ಮುಂದಾಗಿದೆ.

ಆರೋಗ್ಯ ಇಲಾಖೆ 23 ತಂಡಗಳಿಂದ ಪ್ರತೀ ದಿನ 100 ಮನೆಗಳ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಅಲ್ಲದೇ ಸ್ವಚ್ಛತೆ ಕಾಪಾಡುವಂತೆ ಪುರಸಭೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಜತೆಗೆ ಆರೋಗ್ಯ ಇಲಾಖೆ ಡೆಂಗ್ಯೂ ತಡೆಗಟ್ಟಲು ಜನರ ಸಹಕಾರ ಕೋರಿದೆ.

ಕಳೆದ 21 ದಿನಗಳಿಂದ ಮಾನ್ವಿ ಪಟ್ಟಣದಲ್ಲಿ ಡೇಂಗ್ಯೂ ಜ್ವರ ಹೆಚ್ಚಳವಾಗುತ್ತಿದೆ. ಆದರೆ ಜ್ವರ ಹೆಚ್ಚಳವಾದರೂ ಸ್ವಚ್ಚತೆ ಬಗ್ಗೆ ಗಮನ‌ ನೀಡದ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು. ಹೀಗಾಗಿ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ ನಿರ್ಲಕ್ಷ್ಯದಿಂದ ಬಡ ಮಕ್ಕಳು ನರಳಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ತಾಲೂಕು ಆಸ್ಪತ್ರೆಯೊಂದರಲ್ಲೇ 21 ದಿನಗಳಲ್ಲಿ 1474 ಜನರಿಗೆ ಡೇಂಗ್ಯೂ ಪರೀಕ್ಷೆ ನಡೆಸಲಾಗಿದೆ. 1474 ಜನರಲ್ಲಿ 151 ಜನಕ್ಕೆ ಡೇಂಗ್ಯೂ ಪಾಸಿಟಿವ್ ಬಂದಿದೆ. ಹೀಗಾಗಿ ಆಸ್ಪತ್ರೆ ಭರ್ತಿಯಾಗಿದೆ.

ಮಾನವಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಬೇರೆ ಬೇರೆ ಆಸ್ಪತ್ರೆಗಳಿಗೆ ಶಿಫ್ಟ್​ ಸಿಂಧನೂರು, ರಾಯಚೂರು, ಬಳ್ಳಾರಿ ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ರೋಗಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಇನ್ನು ಬೇರೆ ಕಡೆ ಹೋಗಲು ದುಡ್ಡು ಇಲ್ಲದೆ ಬಡರೋಗಿಗಳ ಪರದಾಟ ನಡೆಸುತ್ತಿದ್ದಾರೆ. ಒಟ್ಟಾರೆ ಹೆಚ್ಚುತ್ತಿರುವ ಕಾಯಿಲೆಯಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

ಇದನ್ನೂ ಓದಿ: ಗದಗ: ಶಂಕಿತ ಡೆಂಗ್ಯೂಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಬಲಿ

Bengaluru: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳ ಏರಿಕೆ; ಬಿಬಿಎಂಪಿಯಿಂದ ಮನೆ ಮನೆ ಸಮೀಕ್ಷೆ

Published On - 12:48 pm, Sun, 24 October 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ