ರಾಯಚೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಮೂವರು PWD ಅಧಿಕಾರಿಗಳ ಸಾವು

ರಸ್ತೆ ಬದಿ ಮಾತನಾಡುತ್ತಾ ನಿಂತಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಮೇಲೆ ಲಾರಿ ಬಿದ್ದಿದೆ. ಘಟನೆಯಲ್ಲಿ ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನನ್ನು ಸಿಂಧನೂರು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿನ ಡಾಲರ್ಸ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಪ್ರಕರಣದ ತನಿಖೆ ನಡೆಯುತ್ತಿದೆ.

ರಾಯಚೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಮೂವರು PWD ಅಧಿಕಾರಿಗಳ ಸಾವು
ಸಾಂದರ್ಭಿಕ ಚಿತ್ರ
Follow us
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ

Updated on: Dec 17, 2024 | 12:41 PM

ರಾಯಚೂರು, ಡಿಸೆಂಬರ್​ 17: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಲೋಕೋಪಯೋಗಿ ಇಲಾಖೆಯ (PWD) ಮೂವರು ಅಧಿಕಾರಿಗಳು ಮೃತಪಟ್ಟಿದ್ದಾರೆ. ರಾಯಚೂರು (Raichur) ಜಿಲ್ಲೆಯ ಸಿಂಧನೂರಿನ (Sindhanur) ಡಾಲರ್ಸ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಮಲ್ಲಿಕಾರ್ಜುನ (29), ಶಿವರಾಜು (28), ಮೆಹಬೂಬ್ (30) ಮೃತ ದುರ್ದೈವಿಗಳು. ಲೋಕೋಪಯೋಗಿ ಇಲಾಖೆಯಲ್ಲಿ ಜೂನಿಯರ್ ಇಂಜಿನಿಯರ್​ಗಳಾಗಿದ್ದ​​ ಮಲ್ಲಿಕಾರ್ಜುನ, ಶಿವರಾಜು ಮತ್ತು ಕಂಪ್ಯೂಟರ್ ಆಪರೇಟರ್ ಆಗಿದ್ದ ಮೆಹಬೂಬ್ ಸೋಮವಾರ (ಡಿಸೆಂಬರ್​ 16) ರಾತ್ರಿ ಕೆನಲ್ ಡ್ಯೂಟಿ ಮುಗಿಸಿಕೊಂಡು ಮನೆಗೆ ಹೊರಟಿದ್ದರು.

ರಸ್ತೆ ಬದಿ ಮೂವರು ಮಾತಾಡುತ್ತ ನಿಂತಿದ್ದರು. ಅದೇ ಮಾರ್ಗವಾಗಿ ಬಂದ ಹೊಟ್ಟು ತುಂಬಿದ್ದ ಲಾರಿ ಚಾಲಕನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಮೂವರು ಅಧಿಕಾರಿಗಳ ಮೇಲೆ ಬಿದ್ದಿದೆ. ಲಾರಿ ಕೆಳಗೆ ಸಿಲುಕಿ ಮಲ್ಲಿಕಾರ್ಜುನ, ಶಿವರಾಜು, ಮೆಹಬೂಬ್ ಮೃತಪಟ್ಟಿದ್ದಾರೆ. ಸಿಂಧನೂರು ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ