AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: 8 ವರ್ಷಗಳಿಂದ ಗೃಹಬಂಧನದಲ್ಲಿರುವ ಮಾನಸಿಕ ಅಸ್ವಸ್ಥನಿಗೆ ಮುಕ್ತಿ; ಆಸ್ಪತ್ರೆಗೆ ದಾಖಲು

ಮರದ ಮೇಲಿಂದ ಬಿದ್ದು ಮಾನಸಿಕ ಅಸ್ವಸ್ಥನಾಗಿದ್ದ ಮಗನನ್ನು ಹೆತ್ತವರೇ ಕಳೆದ ಎಂಟು ವರ್ಷಗಳಿಂದ ಮಗನನ್ನ ಗೃಹ ಬಂಧನದಲ್ಲಿರಿಸಿದ್ದರು. ಈ ಬಗ್ಗೆ ಟಿವಿ9 ಡಿಜಿಟಲ್​​ನಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು.

ರಾಯಚೂರು: 8 ವರ್ಷಗಳಿಂದ ಗೃಹಬಂಧನದಲ್ಲಿರುವ ಮಾನಸಿಕ ಅಸ್ವಸ್ಥನಿಗೆ ಮುಕ್ತಿ; ಆಸ್ಪತ್ರೆಗೆ ದಾಖಲು
ಮಾನಸಿಕ ಅಸ್ವಸ್ಥ ಯುವಕ
ಭೀಮೇಶ್​​ ಪೂಜಾರ್
| Edited By: |

Updated on: Oct 08, 2023 | 1:19 PM

Share

ರಾಯಚೂರು ಅ.08: ಲಿಂಗಸೂರು (Lingasuru) ತಾಲ್ಲೂಕಿನ ದೇವರಭೂಪೂರ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಹೆತ್ತವರೇ ಮಗನನ್ನ ಗೃಹ ಬಂಧನದಲ್ಲಿರಿಸಿದ್ದರು. ಈ ಸುದ್ದಿ ಟವಿ9 ಡಿಜಿಟಲ್​​ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು (Health Department Officers) ಮತ್ತು ಪೊಲೀಸರು ಎಚ್ಚೆತ್ತುಕೊಂಡು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಆರೋಗ್ಯ ಅಧಿಕಾರಿಗಳು ಮಾನಸಿಕ ಅಸ್ವಸ್ಥ ಹನುಮಂತನ ಆರೋಗ್ಯ ಸ್ಥಿತಿ-ಗತಿ ಬಗ್ಗೆ ಮಾಹಿತಿ ಕಲೆ ಹಾಕಿ, ಆತನ ಕೇಸ್ ಹಿಸ್ಟರಿ ಪಡೆದು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅವಶ್ಯಕತೆ ಇದ್ದರೆ ರಿಮ್ಸ್​ನಿಂದ ಧಾರವಾಡದ ಮಾನಸಿಕ ರೋಗಿಗಳ ಆಸ್ಪತ್ರೆಗೆ ಹನುಮಂತನನ್ನು ರವಾನಿಸಲು ವೈದ್ಯರು ಚಿಂತನೆ ನಡೆಸಿದ್ದಾರೆ.

ಎಂಟು ವರ್ಷಗಳಿಂದ ಗೃಹಬಂಧನದಲ್ಲಿರುವ ಮಾನಸಿಕ ಅಸ್ವಸ್ಥ

ಲಿಂಗಸುಗೂರು ತಾಲ್ಲೂಕಿನ ದೇವರಭೂಪೂರ ಗ್ರಾಮದಲ್ಲಿ ವಾಸವಾಗಿರುವ ರಂಗಪ್ಪ ಹಾಗೂ ನೀಲಮ್ಮ ದಂಪತಿಯ ಹಿರಿಯ ಮಗ ಹನುಮಂತ (28) ಪಿಯುಸಿವರೆಗೂ ಓದಿದ್ದಾನೆ. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದಿದ್ದರಿಂದ ಮುಂದೆ ಓದಲು ಸಾಧ್ಯವಾಗಲಿಲ್ಲ. ಹೀಗಾಗಿ ಬೇರೆಯವರ ಹೊಲಕ್ಕೆ ದುಡಿಯಲು ಹೋಗುತ್ತಿದ್ದನು.

ಹೀಗೆ ಒಂದು ದಿನ ಹೊಲಕ್ಕೆ ದುಡಿಯಲು ಹೋದಾಗ ಮರದ ಮೇಲಿಂದ ಬಿದ್ದು, ತಲೆಗೆ ಪೆಟ್ಟಾಗಿದೆ. ಇದರಿಂದ ಆತ ಮಾನಸಿಕ ಅಸ್ವಸ್ಥನಂತೆ ವರ್ತಿಸಲು ಆರಂಭಿಸಿದ್ದಾನೆ. ಕಲ್ಲು, ಗಾಜು, ಕಟ್ಟಿಗೆ ತಿನ್ನಲು ಆರಂಭಿಸಿದ್ದಾರೆ. ಅಲ್ಲದೆ ಸಾಕು ಪ್ರಾಣಿಗಳ ಕತ್ತು ಸೀಳಿ ಹತ್ಯೆಗೈಯಲು ಆರಂಭಿಸಿದ್ದಾನೆ. ಇಷ್ಟೇ ಅಲ್ಲದೆ ಗ್ರಾಮಸ್ಥರ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದನು. ಈ ಬಗ್ಗೆ ಗ್ರಾಮಸ್ಥರು ಹನುಮಂತನ ಪೋಷಕರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ರಾಯಚೂರಿನಲ್ಲಿ ಪೋಷಕರಿಂದಲೇ 28 ವರ್ಷದ ಮಗನ ಗೃಹ ಬಂಧನ! ಹೆತ್ತವರ ಕಣ್ಣೀರ ಕಥೆ

ಈ ಹಿನ್ನೆಲೆಯಲ್ಲಿ ಪೋಷಕರು ಹನುಮಂತನ ಕೈಕಾಲುಗಳಿಗೆ ಸರಪಳಿ ಕಟ್ಟಿ ಕಳೆದ ಎಂಟು ವರ್ಷಗಳಿಂದ ಗೃಹ ಬಂಧನದಲ್ಲಿರಿಸಿದ್ದರು. ಹನುಮಂತ ಕೋಣೆಯೊಳಗೆ ಮಲ, ಮೂತ್ರ ವಿಸರ್ಜನೆ ಮಾಡುತ್ತಿದ್ದನು. ಈ ಬಗ್ಗೆ ರಾಯಚೂರು ಟಿವಿ9 ಡಿಜಿಟಲ್​ ಜಿಲ್ಲಾ ವರದಿಗಾರರು ತಿಳಿದು ವರದಿ ಮಾಡಿದ್ದಾರೆ. ವರದಿ ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?