AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಹಗರಣ: ಶಾಸಕ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂಪಾಯಿ ಹಗರಣ ಪ್ರಕರಣದಲ್ಲಿ ಇಡಿ ಮಧ್ಯ ಪ್ರವೇಶಿಸಿದ್ದು, ಇದೀಗ ಕಾಂಗ್ರೆಸ್ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಿ ನಗೇಂದ್ರ ನಿವಾಸದಗಳ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದರ ಮಧ್ಯೆ ದದ್ದಲ್​ ಮಾಜಿ ಆಪ್ತ ಸಹಾಯಕ ಪಂಪಣ್ಣನನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಲ್ಮೀಕಿ ಹಗರಣ: ಶಾಸಕ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ
ಪಂಪಣ್ಣ ಇಡಿ ವಶಕ್ಕೆ
ಭೀಮೇಶ್​​ ಪೂಜಾರ್
| Edited By: |

Updated on:Jul 11, 2024 | 3:19 PM

Share

ರಾಯಚೂರು, (ಜುಲೈ 11): ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಸಂಬಂಧ ಕಾಂಗ್ರೆಸ್​ ಶಾಸಕನ ಮಾಜಿ ಆಪ್ತ ಸಹಾಯಕನನ್ನು ಇಡಿ ವಶಕ್ಕೆ ಪಡೆದುಕೊಂಡಿದೆ.  ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ,  ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಬಸಗೌಡ ದದ್ದಲ್​ ಮಾಜಿ ಆಪ್ತ ಸಹಾಯಕ(ಪಿಎ) ಪಂಪಣ್ಣನನ್ನು ಇಡಿ ಅಧಿಕಾರಿಗಳು ಇಂದು (ಜುಲೈ 11) ವಶಕ್ಕೆ ಪಡೆದುಕೊಂಡಿದ್ದಾರೆ.

ಬಸನಗೌಡ ದದ್ದಲ್​ ನಿವಾಸದ ಮೇಲೆ ದಾಳಿ ಮಾಡಿದ ಬಳಿಕ ಅವರ ಮಾಜಿ ಆಪ್ತ ಸಹಾಯಕರಾಗಿದ್ದ ಪಂಪಣ್ಣ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ನಿನ್ನೆಯಿಂದಲೇ ಪಂಪಣ್ಣ ನಿವಾಸದಲ್ಲಿ ದಾಖಲೆಗಳನ್ನು ಪರಿಶೀನಲೆ ನಡೆಸಿದ್ದಾರೆ. ಆದ್ರೆ, ಬೇರೆ ದಾಖಲೆಗಳು ಪತ್ತೆಯಾಗಿದ್ದರಿಂದ ಸುದೀರ್ಘ 24 ಗಂಟೆಗಳ ಪರಿಶೀಲನೆ ನಂತರ ರಾಯಚೂರಿನ ರಾಯಲ್​ಫೋರ್ಟ್ ಅಪಾರ್ಟ್​ಮೆಂಟ್​ನಲ್ಲಿ ಪಂಪಣ್ಣನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ 2 ಬ್ಯಾಗ್ ದಾಖಲೆ ಸಮೇತ ಪಂಪಣ್ಣನನ್ನು ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ಬಸನಗೌಡ ದದ್ದಲ್ ನಿವಾಸಕ್ಕೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಕನ್ನಡ ಕೋಟ್ಯಧಿಪತಿಯಲ್ಲಿ 50 ಲಕ್ಷ ರೂ. ಗೆದ್ದಿದ್ದ ಪಂಪಣ್ಣ ಹಿನ್ನೆಲೆಯೇ ರೋಚಕ!

ನಿನ್ನೆಯಿಂದಲೇ (ಜುಲೈ 10) ಇಡೀ ಅಧಿಕಾರಿಗಳು, ರಾಯಚೂರು ಮತ್ತು ಬೆಂಗಳೂರಿನಲ್ಲಿರುವ ಬಸನಗೌಡ ದದ್ದಲ್​ ನಿವಾಸದಲ್ಲಿ ದಾಖಲೆಗಳನ್ನು ಪರಿಶೀನಲೆ ನಡೆಸಿದ್ದಾರೆ. ಈ ವೇಳೆ ಒಂದೊಂದೆ ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇದೀಗ ಪಂಪಣ್ಣನನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಇಡಿ ಅಧಿಕಾರಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಕ್ಕೆ ಇಡಿ ಅಧಿಕಾರಗಿಳು ಪಂಪಣ್ಣನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಕ್ಷಾಧಾರಗಳನ್ನ ಮುಂದಿಟ್ಟು ಪ್ರಶ್ನಿಸಿದರೂ ನನಗೆ ಗೊತ್ತಿಲ್ಲ ಎನ್ನುವ ಮಾತನೇ ಹೇಳುತ್ತಿದ್ದಾರೆ. ದದ್ದಲ್ ನಿವಾಸದಲ್ಲಿನ ಕೆಲ‌ ದಾಖಲೆಗಳು ಹಾಗೂ ಪಂಪಣ್ಣ ನಿವಾಸದಲ್ಲಿನ ಕೆಲ ದಾಖಲೆಗಳ ಕುರಿತು ಇಡೀ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಆದ್ರೆ, ಪಂಪಣ್ಣ ಮಾತ್ರ ಯಾವುದಕ್ಕೂ ಸರಿಯಾಗಿ ಉತ್ತರ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆ ದದ್ದಲ್ ನಿವಾಸದಲ್ಲಿ ಇಡಿ ಅಧಿಕಾರಿಗಳು ಪಂಪಣ್ಣಗೆ ಮತ್ತೊಂದು ಸುತ್ತಿನ ವಿಚಾರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಆರಂಭವಾಗಿದ್ದು ಹೇಗೆ? ವಂಚನೆಗೆ ಹಾಕಿದ್ದ ಸ್ಕೆಚ್​ನ ಸಂಪೂರ್ಣ ವಿವರ ಇಲ್ಲಿದೆ

ಪಂಪಣ್ಣನ ತರ್ನಾಕ್ ಐಡಿಯಾ ಬಯಲು

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಆಪ್ತ ಸಹಾಯಕರಾಗಿದ್ದ ಪಂಪಣ್ಣ, ಈ ವಾಲ್ಮೀಕಿ ನಿಗಮದ ಹಗರಣ ಬೆಳಕಿಗೆ ಬರುತ್ತಿದ್ದಂತೆಯೇ ಪಿಎ ಹುದ್ದೆಗೆ ಗುಡ್ ಬೈ ಹೇಳಿದ್ದ. ಈ ಹಗರಣದಿಂದ ತಪ್ಪಿಸಿಕೊಳ್ಳಲು ಈ ಪ್ಲ್ಯಾನ್ ಮಾಡಿದ್ದ. ಅಲ್ಲದೇ ಹಗರಣದಲ್ಲಿ ತನ್ನ ಹೆಸರು ಬೆಳಕಿಗೆ ಬರುತ್ತಿದ್ದಂತೆಯೇ ಬೇರೆ ಜನಪ್ರತಿನಿಧಿಗೆ ಪಿಎ ಆಗಲು ಓಡಾಟ ನಡೆಸಿದ್ದ. ನೂತನ ಎಂಎಲ್ ಸಿ ಎ.ವಸಂತ್ ಕುಮಾರ್ ಗೆ ಪಿಎ ಆಗಲು ದಂಬಾಲು ಬುದ್ದಿದ್ದ. ಈ ಮೂಲಕ ಪಂಪಣ್ಣ ಚಾಪೇ ಕೆಳಗೆ ತೂರಲು ಪ್ರಯತ್ನಿಸಿದ್ದ. ಆದ್ರ. ಇಡಿ ಅಧಿಕಾರಿಗಳು ರಂಗೋಲಿ ಕೆಳಗೆ ನುಗ್ಗಿ ಪಂಪಣ್ಣನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Thu, 11 July 24

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್