ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ತರಕಾರಿ ಬೆಳೆಗಳಿಗೆ ಭಾರಿ ಹೊಡೆತ, ರೈತರು ಕಂಗಾಲು
ರಾಯಚೂರು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗದ ಹಿನ್ನೆಲೆ ರೈತರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುವಂತಾಗುತ್ತಿದ್ದು ಕಣ್ಣೀರು ಹಾಕಿದ್ದಾರೆ.
ರಾಯಚೂರು: ಬೇಸಿಗೆ ಬೆನ್ನಲ್ಲೆ ಬಿಸಿಲು ನಾಡು ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಕಂಡು ಬಂದಿದೆ. ರಾಜ್ಯಕ್ಕೆ ಶೇಕಡಾ 40 ರಷ್ಟು ವಿದ್ಯುತ್ ಪೂರೈಸುವ ಶಕ್ತಿಕೇಂದ್ರದಲ್ಲೇ ವಿದ್ಯುತ್ ಸಮಸ್ಯೆ ಎದುರಾಗಿದ್ದು ರಾಯಚೂರು ನಗರದ ಜೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗದ ಹಿನ್ನೆಲೆ ರೈತರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುವಂತಾಗುತ್ತಿದ್ದು ಕಣ್ಣೀರು ಹಾಕಿದ್ದಾರೆ. ಈ ಹಿಂದೆ ಕೃಷಿ ಚಟುವಟಿಕೆಗೆ ಪ್ರತಿದಿನ 12 ಗಂಟೆ ವಿದ್ಯುತ್ ಪೂರೈಸಲಾಗುತ್ತಿತ್ತು. ಈಗ 12 ಗಂಟೆ ಬದಲು 8 ಗಂಟೆ ವಿದ್ಯುತ್ ಪೂರೈಸಲಾಗುತ್ತಿದೆ. ಜೊತೆಗೆ ಗಂಟೆಗೊಮ್ಮೆ ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಹೀಗಾಗಿ ರೈತರು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಜೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದ್ರೆ ಇಷ್ಟೆಲ್ಲಾ ಆದರೂ ಈ ವರೆಗೆ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಜಿಲ್ಲೆಯಲ್ಲಿ ಭತ್ತ, ಶೇಂಗಾ, ತರಕಾರಿ ಬೆಳೆಗಳಿಗೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ ಎಂದು ರೈತರ ಕಣ್ಣೀರು ಹಾಕಿದ್ದಾರೆ. ಮೊದಲಿನಂತೆ 12 ಗಂಟೆ ವಿದ್ಯುತ್ ಪೂರೈಕೆಗೆ ರೈತರು ಒತ್ತಾಯಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಈ ವೆರೆಗೆ ವಿದ್ಯುತ್ ಸಂಪರ್ಕ ಕೊಟ್ಟಿಲ್ಲ. ಕೊಳವೆ ಬಾವಿ ಕೊರೆಸಿ ವರ್ಷಗಳೇ ಕಳೆದ್ರೂ, ಈ ವರೆಗೆ ವಿದ್ಯುತ್ ಸಂಪರ್ಕ ನೀಡಿಲ್ಲ. ಬೆಳೆ ಹಾಳಾದರೇ ನೀವೇ ಜವಾಬ್ದಾರರು ಅಂತ ರೈತರು ಅಧಿಕಾರಿಗಳ ಮೇಲೆ ಕೆಂಡಾಮಂಡಲರಾಗಿದ್ದಾರೆ. ಪವರ್ ಟ್ರಾನ್ಸ್ ಫಾರ್ಮರ್ ದುರಸ್ಥಿ ಕಾರ್ಯ ನಡೀತಿದೆ. ಕೂಡಲೇ ವಿದ್ಯುತ್ ಸಮಸ್ಯೆ ಪರಿಹರಿಸೋದಾಗಿ ಜೆಸ್ಕಾ ಅಧಿಕಾರಿಗಳು ಉತ್ತರಿಸಿದ್ದಾರೆ.
ಇದನ್ನೂ ಓದಿ: ‘ನೆನಪಿರಲಿ’ ಪ್ರೇಮ್ ಮಗಳ ಜನ್ಮದಿನ; ಮುದ್ದಿನ ಪುತ್ರಿಯ ಫೋಟೋ ಹಂಚಿಕೊಂಡು ಶುಭಕೋರಿದ ನಟ