ರಾಯಚೂರು: ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿಯಲ್ಲಿ 178 ಗ್ರಾಮ ಪಂಚಾಯತಿಗಳಿಗೆ ಸ್ವಚ್ಛತಾ ವಾಹನ ವಿತರಣೆ
ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ವಸತಿ ಸಚಿವ ಸೋಮಣ್ಣ, ವಿತರಣೆಯಾಗುವ ವಾಹನಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.
ರಾಯಚೂರು: ಜಿಲ್ಲೆಯ 178 ಗ್ರಾಮ ಪಂಚಾಯತಿಗಳಿಗೆ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛತಾ ವಾಹನಗಳ ವಿತರಣೆ ಮಾಡಲಾಗಿದೆ. 2 ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿಸಿದ 37 ಸ್ವಚ್ಛತಾ ವಾಹನಗಳನ್ನು ಇಂದು ವಿತರಣೆ ಮಾಡಲಾಗಿದೆ. ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ವಸತಿ ಸಚಿವ ಸೋಮಣ್ಣ, ವಿತರಣೆಯಾಗುವ ವಾಹನಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.
ಈ ಸ್ವಚ್ಛತಾ ವಾಹನಗಳ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಶಾಶ್ವತ ಪರಿಹಾರಕ್ಕೆ ನಿರ್ಧರಿಸಲಾಗುತ್ತದೆ. ಆದ್ಯತೆಗೆ ಅನುಗುಣವಾಗಿ ಸ್ಚಚ್ಛ ಭಾರತ ಮಿಷನ್ ಯೋಜನೆಯಡಿ ಎಲ್ಲಾ ವಾಹನಗಳನ್ನು ವಿತರಣೆ ಮಾಡಲಾಗಿದೆ. ಈ ಬಗ್ಗೆ ಎಲ್ಲಾ ಮಾಹಿತಿ ಪಡೆದು ತ್ವರಿತವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ವಸತಿ ಸಚಿವ ಸೋಮಣ್ಣ ಸೂಚನೆ ನೀಡಿದ್ದಾರೆ.
ಮಾಹಿತಿ ನೀಡದೇ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಸಿಟ್ಟಿಗೆದ್ದ ಸಚಿವರು ಘನತ್ಯಾಜ್ಯ ವಿಲೇವಾರಿ ವಾಹನಗಳ ವಿತರಣೆ ಕಾರ್ಯಕ್ರಮ ಆಯೋಜಿಸಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದು ವಸತಿ ಸಚಿವರಾದ ಸೋಮಣ್ಣ ಸಿಟ್ಟಾದರು. ಜಿಲ್ಲೆಯ 37 ಗ್ರಾಮ ಪಂಚಾಯತಿಗೆ ತಲಾ ಒಂದು ವಾಹನ ವಿತರಣೆಗೆ ಚಾಲನೆ ನೀಡಲಾಗಿದ್ದು, ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಬಗ್ಗೆ ಬೆಳಗ್ಗೆ ದಿಢೀರನೆ ಹೇಳಿದ್ದಕ್ಕೆ ಜಿಲ್ಲಾ ಪಂಚಾಯತಿ ಅಧಿಕಾರಿಗಳ ವಿರುದ್ಧ ಸಚಿವ ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸ್ವಚ್ಛತಾ ಕಾಮಗಾರಿ ಪರಿಶೀಲನೆಗೆ ಉಟ್ಟ ಸೀರೆಯಲ್ಲೇ ಮ್ಯಾನ್ಹೋಲ್ಗೆ ಇಳಿದ ಪಾಲಿಕೆ ಅಧಿಕಾರಿ: ವಿಡಿಯೋ ವೈರಲ್
ಗುಣಮಟ್ಟದ ಮಾಸ್ಕ್, ಸ್ಯಾನಿಟೈಸರ್ ಸಿಗುತ್ತಿಲ್ಲ; ಧಾರವಾಡ ಮಹಾನಗರ ಪಾಲಿಕೆಯ ಸ್ವಚ್ಛತಾ ಕಾರ್ಮಿಕರ ಆರೋಪ