ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ: ಏಮ್ಸ್​ ಆಸ್ಪತ್ರೆ ಹೋರಾಟಕ್ಕೆ ಬಲ ತುಂಬಿದ ಶಿವಣ್ಣ

ವೇದ ಸಿನೆಮಾದ ಟೀಸರ್ ಬಿಡುಗಡೆಗೆ ಎಂದು ರಾಯಚೂರಿಗೆ ಆಗಮಿಸಿದ್ದ ಹ್ಯಾಟ್ರೀಕ್ ಹೀರೋ ಶಿವರಾಜ್ ಕುಮಾರ್. ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ಮಾಡುತ್ತೇವೆ ಎಂದರು. ಅಲ್ಲದೇ ಏಮ್ಸ್​ ಆಸ್ಪತ್ರೆ ಹೋರಾಟಕ್ಕೆ ಬಲ ತುಂಬಿದರು.

ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ: ಏಮ್ಸ್​ ಆಸ್ಪತ್ರೆ ಹೋರಾಟಕ್ಕೆ ಬಲ ತುಂಬಿದ ಶಿವಣ್ಣ
ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌
Follow us
| Updated By: ರಮೇಶ್ ಬಿ. ಜವಳಗೇರಾ

Updated on: Dec 03, 2022 | 10:53 PM

ರಾಯಚೂರು: ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ (AIIMS Hospital) ಒತ್ತಾಯಿಸಿ ಬಹಳ ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಇದೀಗ ಏಮ್ಸ್​ ಹೋರಾಟಗಾರ ಕೂಗಿಗೆ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ (shivaraj kumar) ಧ್ವನಿಗೂಡಿಸಿದ್ದು, ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ಮಾಡುತ್ತೇವೆ. ಏಮ್ಸ್ ಸ್ಥಾಪನೆಗೆ ನಾವು ಸಹಕರಿಸುತ್ತೇವೆ ಎಂದಿದ್ದಾರೆ. ಈ ಮೂಲಕ ಶಿವಣ್ಣನ ಹೇಳಿಕೆಯಿಂದ ಏಮ್ಸ್​ ಹೋರಾಟಕ್ಕೆ ಮತ್ತಷ್ಟು ಬಲಬಂದಂತಾಗಿದೆ.

ಇಂದು (ಡಿಸೆಂಬರ್ 03) ರಾಯಚೂರಿನಲ್ಲಿ ಸಂಜೆ ನಡೆದ ವೇದ ಚಿತ್ರದ ಪ್ರೀ ರೀಲಿಸ್ (vedha film Teaser) ಇವೆಂಟ್ ಕಾರ್ಯಕ್ರಮದಲ್ಲಿ ರಾಯಚೂರು ಹಿಂದುಳಿದ ಜಿಲ್ಲೆ. ನಮ್ಮ ಸಮಸ್ಯೆಗಳಿಗೆ ಯಾರೂ ಸ್ಪಂದಿಸಲ್ಲ ಅನ್ನೋ ಜನರ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ, ಹಿಂದುಳಿದ ರಾಯಚೂರು ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ಮಾಡುತ್ತೇವೆ. ಏಮ್ಸ್ ಸ್ಥಾಪನೆಗೆ ನಾವು ಸಹಕರಿಸುತ್ತೇವೆ ಎಂದು ಭರವಸೆ ನೀಡಿದರು.

ಇವತ್ತು ಪ್ರೆಸ್ ನವರು ಇಲ್ಲಿನ ಸಮಸ್ಯೆಗಳ ಬಗ್ಗೆ ಅದನ್ನೇ ಹೇಳಿದ್ರು. ನಮ್ಮ ಗಡಿ ಜಿಲ್ಲೆ ರಾಯಚೂರಿನ ಸಮಸ್ಯೆಗಳಿಗೆ ಯಾರೂ ಸ್ಪಂದಿಸಲ್ಲ ಅಂದ್ರು. ಈ ವರೆಗೆ ಇಲ್ಲಿಗೆ ಬರಲಾಗಿಲ್ಲ. ದಯವಿಟ್ಟು ಕ್ಷಮಿಸಿ. ಮುಂದಿನ ದಿನಗಳಲ್ಲಿ ಇಲ್ಲಿನ ಎಲ್ಲಾ ಸಮಸ್ಯೆಗಳಿಗೆ ನಾವೆಲ್ಲಾ ನಟರು ನಿಮ್ಮೊಟ್ಟಿಗೆ ಇರುತ್ತೇವೆ ಎಂದು ಹೇಳಿದರು.

ಇಲ್ಲಿ ಏಮ್ಸ್ ಸ್ಥಾಪನೆಗಾಗಿ ಹೋರಾಟ ನಡೆಯುತ್ತಿವೆ. ನಿಮ್ಮ ಆಸೆಯಂತೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ನಾವು ಸಹಕರಿಸುತ್ತೇವೆ. ನಿಮ್ಮ ಆಶಯದಂತೆ ನಾನು ಸಿಎಂರನ್ನ ಭೇಟಿಯಾಗಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತ ಚರ್ಚಿಸುತ್ತೇನೆ ಎಂದು ಶಿವಣ್ಣ ಮಾತು ಕೊಟ್ಟರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ