ರಾಯಚೂರು, (ಜುಲೈ 24): ಗಂಡ ಸಿರವಾರ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿದ್ದರೆ, ಹೆಂಡ್ತಿ ದೇವದುರ್ಗ ಠಾಣೆ ಕಾನ್ಸ್ ಟೇಬಲ್ ಆಗಿದ್ದಾರೆ. ಇಬ್ಬರು ಅನ್ಯೂನ್ಯವಾಗಿದ್ದರು. ಆದ್ರೆ, ಹೆಡ್ಕಾನ್ಸ್ಟೇಬಲ್ ರಾಜ್ ಮೊಹಮ್ಮದ್ ಬೇರೆ ಹೆಣ್ಮಗಳ ಪ್ರೀತಿಯ ಬಲೆಗೆ ಬಿದ್ದಿದ್ದು, ಇದೀಗ ರಾಜ್ ಮೊಹಮ್ಮದ್ ಮನೆಯೊಂದರಲ್ಲಿ ಪ್ರೇಯಸಿ ಜೊತೆ ಚೆಲ್ಲಾಟವಾಡುವಾಗಲೇ ಹೆಂಡ್ತಿ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹೌದು.. ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ಮನೆಯೊಂದರಲ್ಲಿ ಹೆಡ್ಕಾನ್ಸ್ಟೇಬ್ ರಾಜ್ ಮೊಹಮ್ಮದ್, ಪ್ರೇಯಸಿ ಜೊತೆ ಇದ್ದಾಗಲೇ ಸಿಕ್ಕಿಬಿದ್ದಿದ್ದಾರೆ. ತನ್ನ ಪತಿ ಪ್ರೇಯಸಿ ಜೊತೆ ಇರುವುದನ್ನು ರೆಡ್ಹ್ಯಾಂಡ್ ಆಗಿ ಲಾಕ್ ಮಾಡಿದ ಪತ್ನಿ ಪ್ಯಾರಿ ಬೇಗಂ, ಬಳಿಕ ಎಸ್ಪಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ರಾಜ್ ಮೊಹಮ್ಮದ್ , ಪ್ರೇಯಸಿಗಾಗಿ ಕಳೆದ 4 ವರ್ಷಗಳಿಂದ ಪತ್ನಿಯನ್ನು ದೂರ ಮಾಡಿದ್ದ ಎಂದು ಆರೋಪಿಸಲಾಗಿದೆ. ಆದ್ರೆ, ಈ ಬಾರಿ ಹೆಡ್ಕಾನ್ಸ್ಟೇಬಲ್ ರಾಜ್ ಮೊಹಮ್ಮದ್, ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ಮನೆಯೊಂದರಲ್ಲಿ ಪ್ರೇಯಸಿ ಜೊತೆ ಇರುವಾಗಲೇ ಪತ್ನಿ ಪ್ಯಾರಿ ಬೇಗಂ ಲಾಕ್ ಮಾಡಿದ್ದು, ಬಳಿಕ ಕರೆ ಮಾಡಿ ಎಸ್ಪಿಗೆ ದೂರು ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಠಾಣೆ ಪೊಲೀಸರು ಆಗಮಿಸಿ ಮನೆ ಲಾಕ್ ಓಪನ್ ಮಾಡಿ ಬಳಿಕ ಹೆಡ್ಕಾನ್ಸ್ಟೇಬಲ್ ರಾಜ್ ಮೊಹಮ್ಮದ್ ಮತ್ತು ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಸುತ್ತಮುತ್ತಲಿನ ಜನರು ಜಮಾವಣೆಗೊಂಡಿದ್ದರು.
ಈ ಹಿಂದೆ ಎರಡು ಬಾರಿ ಹಿರಿಯ ಅಧಿಕಾರಿಗಳು ರಾಜ್ ಮೊಹಮ್ಮದ್ಗೆ ಬೈದು ಬುದ್ದಿ ಹೇಳಿದ್ದರು. ಆದ್ರೆ, ರಾಜ್ ಮೊಹಮ್ಮದ್ ತನ್ನ ಚಾಳಿ ಹಳೇ ಚಾಳಿ ಮಾತ್ರ ಬಿಟ್ಟಿಲ್ಲ. ಈ ಹಿಂದೆ ಹಲವರು ತಿಳುವಳಿಕೆ ಹೇಳಿದ್ದರೂ ಸಹ ಮತ್ತೆ ಅದೇ ರಾಗ ಮುಂದುವರೆಸಿರುವ ರಾಜ್ ಮೊಹಮ್ಮದ್ ವಿರುದ್ಧ ಪತ್ನಿ ದೂರು ನೀಡಲು ಮುಂದಾಗಿದ್ದಾರೆ.
Published On - 10:39 pm, Wed, 24 July 24