ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದಾರೆ. ಇತ್ತ, ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ
ರಾಯಚೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ಎರಡು ದೂರು ದಾಖಲು (ಸಾಂದರ್ಭಿಕ ಚಿತ್ರ)Image Credit source: bit.ly/3g2VADu
Follow us
ಭೀಮೇಶ್​​ ಪೂಜಾರ್
| Updated By: Rakesh Nayak Manchi

Updated on: Nov 03, 2023 | 2:58 PM

ರಾಯಚೂರು, ನ.3: ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ (Dead Body) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದನು. ಆದರೆ, ತನ್ನ ತಾಯಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಮಂಜುಳಾ (45) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸಾವಿಗೂ ಮುನ್ನ ಮಂಜುಳಾ, ಬ್ಯಾಂಕ್​ನಿಂದ‌ ಪಡೆದ 10 ಲಕ್ಷ ಸಾಲದ ಹಣವನ್ನು ವಿತ್ ಡ್ರಾ ಮಾಡಿ ಮನೆಯಲ್ಲಿಟ್ಟಿದ್ದಳು. ಆದರೆ, ಈ ಹಣ ಮತ್ತು ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದೆ.

ಇದನ್ನೂ ಓದಿ: ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ

ಯಾರೋ ಪರಿಚಯಸ್ಥರು ಬ್ಲ್ಯಾಕ್ ಮೇಲ್ ಮಾಡಿ ಹಣ, ಚಿನ್ನ ಲೂಟಿ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಮಂಜುಳ ಮಗ ಸಚಿನ್ ದೂರು ನೀಡಿದ್ದಾನೆ. ಪೆಟ್ರೋಲ್ ಹಾಗೂ ಕೆಮಿಕಲ್​ನಿಂದ ಬೆಂಕಿ ಹಚ್ಚಿ ಕೊಲೆಗೈದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರು ಸ್ವೀಕರಿಸಿದ ಹಟ್ಟಿ ಠಾಣಾ ಪೊಲೀಸರು, ಎಫ್​​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದರ ಭಾಗವಾಗಿ ಮಂಜುಳ ಕೊನೆಯದಾಗಿ ಯಾರಿಗೆ ದೂರವಾಣಿ ಕರೆ ಮಾಡಿದ್ದರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದರ ಜೊತೆಗೆ ಮೃತಳ ಬ್ಯಾಂಕ್ ಡಿಟೇಲ್ಸ್ ಪಡೆಯಲು ಮುಂದಾಗಿದ್ದಾರೆ.

ಪತಿಯನನ್ನ ಕಳೆದುಕೊಂಡು ತನ್ನ ಮಕ್ಕಳೊಂದಿಗೆ ಮಂಜುಳಾ ಹಟ್ಟಿ ಕಂಪನಿಯ ಕ್ಯಾಂಪ್​ನ ಜಿ.ಆರ್.ಕಾಲೋನಿಯಲ್ಲಿ ವಾಸವಿದ್ದರು. ಪತಿಯನ್ನು ಕಳೆದುಕೊಂಡಿದ್ದ ಆಕೆ, ಮಾನಿಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಅ.26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರ ಮೇಲೂ ಶಂಕೆ ಇಲ್ಲವೆಂದು ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ