Karnataka Rains: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಸಂಜೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೊಸಕೋಟೆ, ಬೆಳ್ಳೂರು, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ದುರ್ಗ, ಚನ್ನರಾಯಪಟ್ಟಣ, ಬೆಂಗಳೂರು ಎಚ್​ಎಎಲ್​, ನಾಗಮಂಗಲ, ಬೆಂಗಳೂರು, ರಾಯಲ್ಪಾಡು, ಮೊಳಕಾಲ್ಮೂರು, ಹೆಸರಘಟ್ಟ, ಹೊಸದುರ್ಗ, ಟಿಜಿ ಹಳ್ಳಿ, ಕೋಲಾರ, ಶಿರಹಟ್ಟಿ, ಜೇವರ್ಗಿ, ಲಕ್ಷ್ಮೇಶ್ವರದಲ್ಲಿ ಮಳೆಯಾಗಿದೆ.

Karnataka Rains: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಮಳೆ
Image Credit source: PTI

Updated on: Apr 18, 2025 | 7:21 AM

ಬೆಂಗಳೂರು, ಏಪ್ರಿಲ್ 18: ಕರ್ನಾಟಕದ ವಿವಿಧೆಡೆ ಇಂದು ಕೂಡ ಮಳೆ(Rain)ಯಾಗಲಿದೆ. ಹಲವು ಕಡೆ ಮೋಡಕವಿದ ವಾತಾವರಣವಿದೆ. ಬಿಸಿಲ ತಾಪ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಏಪ್ರಿಲ್ 22ರ ಬಳಿಕ ಕರ್ನಾಟಕದಾದ್ಯಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹೊಸಕೋಟೆ, ಬೆಳ್ಳೂರು, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ದುರ್ಗ, ಚನ್ನರಾಯಪಟ್ಟಣ, ಬೆಂಗಳೂರು ಎಚ್​ಎಎಲ್​, ನಾಗಮಂಗಲ, ಬೆಂಗಳೂರು, ರಾಯಲ್ಪಾಡು, ಮೊಳಕಾಲ್ಮೂರು, ಹೆಸರಘಟ್ಟ, ಹೊಸದುರ್ಗ, ಟಿಜಿ ಹಳ್ಳಿ, ಕೋಲಾರ, ಶಿರಹಟ್ಟಿ, ಜೇವರ್ಗಿ, ಲಕ್ಷ್ಮೇಶ್ವರದಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 40.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us