AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲಿ ಮುಂದುವರೆದ ಮಳೆ: ನಾಳೆ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಜೊತೆಗೆ ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದಾರೆ. ಈ ಕುರಿತಾಗಿ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕರಾವಳಿಯಲ್ಲಿ ಮುಂದುವರೆದ ಮಳೆ: ನಾಳೆ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಕರಾವಳಿಯಲ್ಲಿ ಮುಂದುವರೆದ ಮಳೆ: ನಾಳೆ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ಗಂಗಾಧರ​ ಬ. ಸಾಬೋಜಿ
|

Updated on:Jul 20, 2024 | 4:37 PM

Share

ಉತ್ತರ ಕನ್ನಡ, ಜುಲೈ 20: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಿರಂತರ ಧಾರಾಕಾರ ಮಳೆ (Rain) ಮುಂದುವರೆದಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದ್ದಾರೆ. ಜೋರು ಮಳೆಗೆ ಇತ್ತೀಚೆಗೆ ಅಂಕೋಲಾ ತಾಲೂಕಿ ಶಿರೂರು ಬಳಿ ಗುಡ್ಡ ಕುಸಿದು 9 ಜನರ ಪೈಕಿ  7 ಜನರು ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಣ್ಣು ಕುಸಿದ ಪರಿಣಾಮ ಸಂಚಾರ ಬಂದ ಆಗಿದೆ. ಹೀಗಾಗಿ ಸದ್ಯ ಹಾನಿಯಾದ ಜಿಲ್ಲೆಯ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ಭೇಟಿ ನೀಡುತ್ತಿದ್ದಾರೆ.

ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿ ನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಜೊತೆಗೆ ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ. 775 ಕೋಟಿ ಹಣ ನೀಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು ಎಂದು ಎಕ್ಸ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಅಂಕೋಲಾ ಶಿರೂರು ಹೆದ್ದಾರಿ ಬಂದ್​: ಮಡಗಾಂವ್ ಜಂಕ್ಷನ್-ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ವ್ಯವಸ್ಥೆ

ಶಿರೂರು ಬಳಿ ಗುಡ್ಡ ಕುಸಿದ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಇಂದು ಭೇಟಿ ಮಾಡಿದ್ದಾರೆ. ಘಟನೆ ಬಗ್ಗೆ ಡಿಸಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದು ದುರಂತ. ದುರಂತದಲ್ಲಿ ಮೃತಪಟ್ಟವರ ಕುಟುಂಬದ ಜತೆ ಸರ್ಕಾರ ನಿಲ್ಲಬೇಕು ಎಂದಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಬೆನ್ನಲ್ಲೇ ಇದೀಗ ನಾಳೆ ಉತ್ತರ ಕನ್ನಡದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:22 pm, Sat, 20 July 24

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?