ಉತ್ತರ ಕನ್ನಡ, ಜುಲೈ 20: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಿರಂತರ ಧಾರಾಕಾರ ಮಳೆ (Rain) ಮುಂದುವರೆದಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದ್ದಾರೆ. ಜೋರು ಮಳೆಗೆ ಇತ್ತೀಚೆಗೆ ಅಂಕೋಲಾ ತಾಲೂಕಿ ಶಿರೂರು ಬಳಿ ಗುಡ್ಡ ಕುಸಿದು 9 ಜನರ ಪೈಕಿ 7 ಜನರು ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಣ್ಣು ಕುಸಿದ ಪರಿಣಾಮ ಸಂಚಾರ ಬಂದ ಆಗಿದೆ. ಹೀಗಾಗಿ ಸದ್ಯ ಹಾನಿಯಾದ ಜಿಲ್ಲೆಯ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ಭೇಟಿ ನೀಡುತ್ತಿದ್ದಾರೆ.
ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿ ನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ.
ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ.
ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ.775… pic.twitter.com/fWN7WAlCUw
— Siddaramaiah (@siddaramaiah) July 20, 2024
ಜೊತೆಗೆ ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ. 775 ಕೋಟಿ ಹಣ ನೀಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು ಎಂದು ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಅಂಕೋಲಾ ಶಿರೂರು ಹೆದ್ದಾರಿ ಬಂದ್: ಮಡಗಾಂವ್ ಜಂಕ್ಷನ್-ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ವ್ಯವಸ್ಥೆ
ಶಿರೂರು ಬಳಿ ಗುಡ್ಡ ಕುಸಿದ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಇಂದು ಭೇಟಿ ಮಾಡಿದ್ದಾರೆ. ಘಟನೆ ಬಗ್ಗೆ ಡಿಸಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದು ದುರಂತ. ದುರಂತದಲ್ಲಿ ಮೃತಪಟ್ಟವರ ಕುಟುಂಬದ ಜತೆ ಸರ್ಕಾರ ನಿಲ್ಲಬೇಕು ಎಂದಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ ಬೆನ್ನಲ್ಲೇ ಇದೀಗ ನಾಳೆ ಉತ್ತರ ಕನ್ನಡದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:22 pm, Sat, 20 July 24