Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಆ 1ರಂದು ಈ ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ

ಕರ್ನಾಟಕದಲ್ಲಿ ನಿರಂತರ ಮಳೆಯಿಂದಾಗಿ ನದಿಗಳ ಬೋರ್ಗರೆತ ಹೆಚ್ಚಾಗುತ್ತಿದೆ. ನದಿ ತೀರದ ಪ್ರದೇಶಗಳಲ್ಲಿ ಮತ್ತಷ್ಟು ಅವಾಂತರಗಳಾಗುವ ಸಾಧ್ಯತೆಗಳಿವೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದಾಗಿ ದಕ್ಚಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್​ 1ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆಯಾ ಡಿಸಿ ಆದೇಶಿಸಿದ್ದಾರೆ.

ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಆ 1ರಂದು ಈ ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ
ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಆ.1ರಂದು ಈ ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Jul 31, 2024 | 10:34 PM

ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿ ಮಳೆ (Rain) ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನದಿಗಳು ಬೋರ್ಗರೆಯುತ್ತಿದ್ರೆ, ಪ್ರವಾಹದ ನೀರು ಜನವಸತಿ ಪ್ರದೇಶನವನ್ನೂ ಆಪೋಷನಕ್ಕೆ ತೆಗೆದುಕೊಂಡಿದೆ. ಮನೆಗಳನ್ನು ಕಳೆದುಕೊಂಡು ಜನರು ಕಂಗಾಲಾಗಿದ್ದಾರೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ನಾಳೆ ಕೂಡ ಕೆಲ ಜಿಲ್ಲೆಗಳಿಲ್ಲಿ ಶಾಲಾ-ಕಾಲೇಜುಗಳಿಗೆ ರಜೆ (holiday) ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ ನೀಡಿ ಆದೇಶಿಸಲಾಗಿದೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ?

ಉಡುಪಿ ಜಿಲ್ಲೆಯಾದ್ಯಂತ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆಯಿಂದ ನಾಳೆ ರೆಡ್ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: ಶಿರಾಡಿಘಾಟ್​ನಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿದ ವಾಹನಗಳು

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಎಲ್ಲಾ‌ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಆದೇಶ ಹೊರಡಿಸಿದ್ದಾರೆ.

ನಕಲಿ ಆದೇಶ ಪ್ರತಿ ವೈರಲ್​

ನಾಳೆ ಶಾಲೆಗಳಿಗೆ ರಜೆ ಎಂಬಂತೆ ಕೊಡಗು ಡಿಸಿ ನಕಲಿ ಆದೇಶ ಪ್ರತಿಯನ್ನು ಎಡಿಟ್ ಮಾಡಿ ಕಿಡಿಗೇಡಿಗಳಿಂದ ವೈರಲ್​ ಮಾಡುತ್ತಿದೆ. ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಎಂದು ನಕಲಿ ಪ್ರತಿ ವೈರಲ್​ ಮಾಡಲಾಗಿದ್ದು, ಜಿಲ್ಲೆಯ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿದೆ.

ಇದನ್ನೂ ಓದಿ: Netravathi River: ಬಂಟ್ವಾಳದಲ್ಲಿ ನೇತ್ರಾವತಿ ನದಿ ಪ್ರವಾಹ, ಪುರಸಭಾ ವಾಣಿಜ್ಯ ಸಂಕೀರ್ಣ ಸೇರಿ ಹಲವೆಡೆ ಜಲಾವೃತ

ನಕಲಿ ಆದೇಶ ಪ್ರತಿ ಸೃಷ್ಟಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಇದುವರೆಗೆ ಈ ಬಗ್ಗೆ ಕೊಡಗು ಡಿಸಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ