ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿ ಮಳೆ (Rain) ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನದಿಗಳು ಬೋರ್ಗರೆಯುತ್ತಿದ್ರೆ, ಪ್ರವಾಹದ ನೀರು ಜನವಸತಿ ಪ್ರದೇಶನವನ್ನೂ ಆಪೋಷನಕ್ಕೆ ತೆಗೆದುಕೊಂಡಿದೆ. ಮನೆಗಳನ್ನು ಕಳೆದುಕೊಂಡು ಜನರು ಕಂಗಾಲಾಗಿದ್ದಾರೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ನಾಳೆ ಕೂಡ ಕೆಲ ಜಿಲ್ಲೆಗಳಿಲ್ಲಿ ಶಾಲಾ-ಕಾಲೇಜುಗಳಿಗೆ ರಜೆ (holiday) ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ ನೀಡಿ ಆದೇಶಿಸಲಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆಯಿಂದ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಶಿರಾಡಿಘಾಟ್ನಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿದ ವಾಹನಗಳು
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಆದೇಶ ಹೊರಡಿಸಿದ್ದಾರೆ.
ನಾಳೆ ಶಾಲೆಗಳಿಗೆ ರಜೆ ಎಂಬಂತೆ ಕೊಡಗು ಡಿಸಿ ನಕಲಿ ಆದೇಶ ಪ್ರತಿಯನ್ನು ಎಡಿಟ್ ಮಾಡಿ ಕಿಡಿಗೇಡಿಗಳಿಂದ ವೈರಲ್ ಮಾಡುತ್ತಿದೆ. ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಎಂದು ನಕಲಿ ಪ್ರತಿ ವೈರಲ್ ಮಾಡಲಾಗಿದ್ದು, ಜಿಲ್ಲೆಯ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿದೆ.
ಇದನ್ನೂ ಓದಿ: Netravathi River: ಬಂಟ್ವಾಳದಲ್ಲಿ ನೇತ್ರಾವತಿ ನದಿ ಪ್ರವಾಹ, ಪುರಸಭಾ ವಾಣಿಜ್ಯ ಸಂಕೀರ್ಣ ಸೇರಿ ಹಲವೆಡೆ ಜಲಾವೃತ
ನಕಲಿ ಆದೇಶ ಪ್ರತಿ ಸೃಷ್ಟಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಇದುವರೆಗೆ ಈ ಬಗ್ಗೆ ಕೊಡಗು ಡಿಸಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.