AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಆರ್ಭಟ: ಮರ ಬಿದ್ದು ಯುವಕ ಸಾವು, ಅಲ್ಲಲ್ಲಿ ಅಸ್ತವ್ಯಸ್ತ

ರಾಜ್ಯದ ಉದ್ದಗಲಕ್ಕೂ ಮುಂಗಾರು ವ್ಯಾಪಿಸಿದ್ದು ಎಲ್ಲೆಡೆ ಮಳೆ ಆರ್ಭಟ ಶುರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜೂನ್​ 8 ರಿಂದ 11ರವರೆಗೂ ಅಂದರೆ ಮೂರು ದಿನಗಳ ಕಾಲ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಿದ್ದು, ಧಾರಾಕಾರ ಮಳೆಗೆ ಮರ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.

ಬೆಳಗಾವಿ, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಆರ್ಭಟ: ಮರ ಬಿದ್ದು ಯುವಕ ಸಾವು, ಅಲ್ಲಲ್ಲಿ ಅಸ್ತವ್ಯಸ್ತ
ಬೆಳಗಾವಿ, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಆರ್ಭಟ: ಮರ ಬಿದ್ದು ಯುವಕ ಸಾವು, ಅಲ್ಲಲ್ಲಿ ಅಸ್ತವ್ಯಸ್ತ
ಗಂಗಾಧರ​ ಬ. ಸಾಬೋಜಿ
|

Updated on: Jun 09, 2024 | 3:51 PM

Share

ಬೆಂಗಳೂರು, ಜೂನ್​ 09: ರಾಜ್ಯದ ಉದ್ದಗಲಕ್ಕೂ ಮುಂಗಾರು ವ್ಯಾಪಿಸಿದ್ದು ಎಲ್ಲೆಡೆ ಮಳೆ (rain) ಆರ್ಭಟ ಶುರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜೂನ್​ 8 ರಿಂದ 11ರವರೆಗೂ ಅಂದರೆ ಮೂರು ದಿನಗಳ ಕಾಲ ಮಳೆ ಸಾಧ್ಯತೆ ಇದೆ ಎಂದು ನಿನ್ನೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರ ಬೆನ್ನೆಲ್ಲೇ ಇಂದು ಕೂಡ ಬೆಂಗಳೂರು (Bengaluru) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಿದೆ. ಧಾರಾಕಾರ ಮಳೆಗೆ ಅವಾಂತರಗಳು  ಕೂಡ ಸಂಭವಿಸಿವೆ.

ಸಿಲಿಕಾನ್ ಸಿಟಿಯಲ್ಲಿ ವರುಣ ಅಬ್ಬರ ಶುರುವಾಗಿದೆ. ವಿಕೆಂಡ್ ಮೂಡ್​ನಲ್ಲಿದ್ದವರಿಗೆ ವರುಣ ಕಾಟ ಕೊಟ್ಟಿದ್ದಾನೆ. ಚಾಮರಾಜಪೇಟೆ, ಕೆಆರ್ ಮಾರುಕಟ್ಟೆ, ಲಾಲ್ ಬಾಗ್, ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ ಸದಾಶಿವನಗರ, ಶಿವಾಜಿನಗರ, ಕೋರಮಂಗಲ, ಸರ್ಜಾಪುರ ರಸ್ತೆ, ಬ್ರಿಗೇಡ್ ರೋಡ್, ಶಾಂತಿನಗರ, ಸೂಳೆ ಸರ್ಕಲ್, ಎಂಜಿ ರೋಡ್, ಸೇರಿದಂತೆ ಬನ್ನೇರುಘಟ್ಟ ರೋಡ್​ನಲ್ಲೂ ಮಳೆ ಸುರಿದಿದೆ. ರಸ್ತೆ ಮೇಲೆ ನೀರು ನಿಂತ ಕಾರಣ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಉಂಟಾಗಿದೆ.

ಬಿರುಗಾಳಿ ಸಹಿತ ಭಾರಿ ಮಳೆ: ಮರ ಬಿದ್ದು ಓರ್ವ ಯುವಕ ಸಾವು

ಬಿರುಗಾಳಿ ಸಹಿತ ಭಾರಿ ಮಳೆಗೆ ಮರ ಬಿದ್ದು ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ನಡೆದಿದೆ. ಕರ್ಲೆ ಗ್ರಾಮದ ಸೋಮನಾಥ್ ಮುಚ್ಚಂಡಿಕರ್(21) ಮೃತ ಯುವಕ. ವಿಠ್ಠಲ್​ ತಳವಾರ್​​, ಸ್ವಪ್ನಿಲ್ ದೇಸಾಯಿ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Bengaluru Rain: ಕೆಆರ್ ಮಾರುಕಟ್ಟೆ, ಲಾಲ್​ಬಾಗ್ ಸೇರಿದಂತೆ ಬೆಂಗಳೂರಿನ ಹಲವೆಡೆ ಮಳೆ

ಮೂವರು ಬೈಕ್​ನಲ್ಲಿ ಬೆಳಗಾವಿಗೆ ತೆರಳುತ್ತಿದ್ದಾಗ ಮರ ಬಿದ್ದು ದುರಂತ ಸಂಭವಿಸಿದೆ. ಸ್ಥಳೀಯರ ನೆರವಿನಿಂದ ಮರ ತೆರವುಗೊಳಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕುಮಟಾದಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದೆ. ಕುಮಟಾ ಪುರಸಭಾ ವ್ಯಾಪ್ತಿಯ ಶಶಿಹಿತ್ಲ ವ್ಯಾಪ್ತಿ ಪ್ರದೇಶದಲ್ಲಿ ಘಟನೆ ನಡೆದಿದೆ. ಸಮರ್ಪಕವಾಗಿ ರಾಜಕಾಲುವೆ ನಿರ್ಮಿಸದೆ ಪುರಸಭೆ ಸಿಬ್ಬಂದಿ ನಿರ್ಲಕ್ಷ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಹೆಚ್ಚಿನ ಮಳೆಯಾದರೆ ಹಲವು ಮನೆಗಳಿಗೆ ನೀರು ನುಗ್ಗುವ ಭೀತಿ ಶುರುವಾಗಿದೆ.

ಭಾರೀ ಮಳೆ ಗಾಳಿಗೆ ರಸ್ತೆಗೆ ಉರುಳಿದ ಮರಗಳು

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದು ಬೆಳಗ್ಗೆಯಿಂದ ಎಡೆಬಿಡದೆ ಮಳೆ ಸುರಿದಿದೆ. ಸಕಲೇಶಪುರ ತಾಲೂಕು ಹಾಗೂ ಶಿರಾಡಿಘಾಟ್‌ನಲ್ಲಿ ಧಾರಾಕಾರ ಮಳೆ ಆಗಿದ್ದು, ಪರಿಣಾಮ ಮರಗಳು ರಸ್ತೆಗೆ ಉರುಳಿವೆ. ವೀಕೆಂಡ್ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಹೆಚ್ಚಾಗಿದ್ದು, ಶಿರಾಡಿಘಾಟ್ ರಸ್ತೆಯಲ್ಲಿ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು