Karnataka Rains: ಈ ವರ್ಷ ಮಳೆಯಿಂದ 69 ಜನ ಸಾವು, 21,168 ಹೆಕ್ಟೇರ್​​ ಬೆಳೆ ಹಾನಿ; ಸಚಿವ ಕೃಷ್ಣ ಭೈರೇಗೌಡ

ಈ ವರ್ಷ ಜನವರಿ ತಿಂಗಳ ನಂತರ ಈವರೆಗೆ ಮಳೆಯಿಂದಾಗಿ 69 ಜನ ಮೃತಪಟ್ಟಿದ್ದಾರೆ. 21,168 ಹೆಕ್ಟೇರ್​​ ಬೆಳೆ ಹಾನಿಯಾಗಿದ ಎಂದು ಕಂದಾಯ ಖಾತೆ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

Karnataka Rains: ಈ ವರ್ಷ ಮಳೆಯಿಂದ 69 ಜನ ಸಾವು, 21,168 ಹೆಕ್ಟೇರ್​​ ಬೆಳೆ ಹಾನಿ; ಸಚಿವ ಕೃಷ್ಣ ಭೈರೇಗೌಡ
ಕೃಷ್ಣ ಭೈರೇಗೌಡ
Follow us
Ganapathi Sharma
|

Updated on: May 31, 2023 | 7:34 PM

ಬೆಂಗಳೂರು: ಈ ವರ್ಷ ಜನವರಿ ತಿಂಗಳ ನಂತರ ಈವರೆಗೆ ಮಳೆಯಿಂದಾಗಿ (Rain) 69 ಜನ ಮೃತಪಟ್ಟಿದ್ದಾರೆ. 21,168 ಹೆಕ್ಟೇರ್​​ ಬೆಳೆ ಹಾನಿಯಾಗಿದ ಎಂದು ಕಂದಾಯ ಖಾತೆ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಗಿರುವ ಮಳೆ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಇಲಾಖೆಯ ಮುಖ್ಯಸ್ಥರ ಜತೆ ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಮಾರ್ಚ್, ಮೇ ತಿಂಗಳಿನಲ್ಲಿ ಕೆಲ‌ವು ಭಾಗಗಳಲ್ಲಿ ಹೆಚ್ಚು ಮಳೆಯಾಗಿದೆ. ಸೋಮವಾರ ಹಾಗೂ ಮಂಗಳವಾರದ ಮಳೆಗೆ ಕೆಲವು ಮನೆಗಳಲ್ಲಿ ಸಣ್ಣಪುಟ್ಟ ಹಾನಿಯಾಗಿದೆ ಎಂದು ಹೇಳಿದರು.

ಬೆಳೆ ಹಾನಿ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದೂ ಅವರು ಮಾಹಿತಿ ನೀಡಿದರು.

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದ್ದು, ಸಾವು-ನೋವು ಸಂಭವಿಸಿದೆ. ಹಲವು ಕಡೆಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ.

ಈ ಮಧ್ಯೆ, ಬೆಂಗಳೂರಿನಲ್ಲಿ ಜೂನ್ 4 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಭಾರೀ ಮಳೆ ಆರಂಭವಾಗಿದ್ದು, ಮಳೆಯಿಂದಾಗುವ ದುರಂತಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆ; ಎಲ್ಲೆಲ್ಲಿ, ಏನು ಹಾನಿ? ಇಲ್ಲಿದೆ ಮಾಹಿತಿ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಮಧ್ಯರಾತ್ರಿ ಯಲಹಂಕ ಪೂರ್ವ ಪ್ರದೇಶಕ್ಕೆ ಭೇಟಿ ನೀಡಿ, ಜಲಾವೃತ ತಡೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ್ದರು. ನಿಯಂತ್ರಣ ಕೊಠಡಿಗಳನ್ನು ಪರಿಶೀಲಿಸಿದ್ದರ ಜತೆಗೆ ಜಾಗರೂಕರಾಗಿರುವಂಗೆ ಮತ್ತು ತ್ವರಿತವಾಗಿ ಪ್ರತಿಕ್ರಿಯಿಸುವಂತೆ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್