ಮಳೆ ಕೊರತೆ; ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧಿಸಿದ ಕರ್ನಾಟಕ
ಕಾಲುಬಾಯಿ ಜ್ವರದಿಂದ ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ಕುರಿತು ಮಾಹಿತಿ ನೀಡಿದ ಸಚಿವರು, ಹಿಂದಿನ ಬಿಜೆಪಿ ಸರ್ಕಾರ ಪರಿಹಾರ ನೀಡುವುದನ್ನು ನಿಲ್ಲಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರವು ಪ್ರತಿ ಜಾನುವಾರು ಸಾವಿಗೆ 10 ಸಾವಿರ ರೂ., ಕುರಿ ಮತ್ತು ಆಡುಗಳು ಸತ್ತರೆ 5 ಸಾವಿರ ರೂ. ಪರಿಹಾರ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಮೈಸೂರು, ಸೆಪ್ಟೆಂಬರ್ 23: ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿತ್ತನೆ ಚಟುವಟಿಕೆಗಳು ಕುಂಠಿತವಾಗಿದೆ. ಹೀಗಾಗಿ ನೆರೆಯ ರಾಜ್ಯಗಳಿಗೆ ಮೇವು (Fodder) ಮಾರಾಟ ಮತ್ತು ಸಾಗಣೆಯನ್ನು ನಿಷೇಧಿಸಿ ಕರ್ನಾಟಕ (Karnataka) ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ (K Venkatesh) ಮಾಹಿತಿ ನೀಡಿದ್ದಾರೆ. ಕಾವೇರಿ ಜಲಾನಯನ ಪ್ರದೇಶದ ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ಇತರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮೇವು ಬೇರೆ ರಾಜ್ಯಗಳಿಗೆ ಮಾರಾಟ ಮತ್ತು ಸಾಗಾಣಿಕೆ ನಿಷೇಧಿಸುವಂತೆ ಸೂಚಿಸಲಾಗಿದೆ. ಜಾನುವಾರುಗಳಿಗೆ ಮೇವು ಬೆಳೆಯಲು ರೈತರಿಗೆ ಉಚಿತವಾಗಿ ಬೀಜಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಾಲುಬಾಯಿ ಜ್ವರದಿಂದ ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ಕುರಿತು ಮಾಹಿತಿ ನೀಡಿದ ಸಚಿವರು, ಹಿಂದಿನ ಬಿಜೆಪಿ ಸರ್ಕಾರ ಪರಿಹಾರ ನೀಡುವುದನ್ನು ನಿಲ್ಲಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರವು ಪ್ರತಿ ಜಾನುವಾರು ಸಾವಿಗೆ 10 ಸಾವಿರ ರೂ., ಕುರಿ ಮತ್ತು ಆಡುಗಳು ಸತ್ತರೆ 5 ಸಾವಿರ ರೂ. ಪರಿಹಾರ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಇದಕ್ಕಾಗಿ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ವೆಂಕಟೇಶ್ ತಿಳಿಸಿದರು.
ಇದನ್ನೂ ಓದಿ: ಆಗಸ್ಟ್, ಸೆಪ್ಟೆಂಬರ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿವಾದ ಉಲ್ಬಣಗೊಳ್ಳುವುದೇಕೆ? ಇಲ್ಲಿವೆ ಕೆಲವು ಕಾರಣ
ಕೇಂದ್ರ ಸರಕಾರವು ಪಶು ಸಹಾಯಕ ಯೋಜನೆಗೆ ಅನುದಾನ ನೀಡಿದ್ದು, ಜಾನುವಾರು ನಿರ್ವಹಣೆಯಲ್ಲಿ ತರಬೇತಿ ಪಡೆದ ಪ್ರತಿ ಮಹಿಳಾ ಪಶು ಸಹಾಯಕರಿಗೆ ಮಾಸಿಕ 3,900 ರೂ.ಗಳನ್ನು ನೀಡಲಾಗುವುದು. ವರುಣಾ ಕ್ಷೇತ್ರದ ಉತ್ತನಹಳ್ಳಿಯಲ್ಲಿ ಸೆಪ್ಟೆಂಬರ್ 26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ವೆಂಕಟೇಶ್ ಮಾಹಿತಿ ನೀಡಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ. ಕಾಲುಬಾಯಿ ರೋಗವನ್ನು ತಡೆಗಟ್ಟಲು ನಾಲ್ಕನೇ ಸುತ್ತಿನ ಲಸಿಕೆ ನೀಡಿಕೆ ಸಹ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ