AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರು ಬಿಸಿಲಿನ ನಡುವೆ ರಾಜ್ಯದಲ್ಲಿ ವಾರದವರೆಗೆ ಮಳೆ: ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ತಜ್ಞ

ಕರ್ನಾಟಕದಲ್ಲಿ ಈ ಭಾರಿಯ ಬಿರು ಬೇಸಿಗೆ ಜನರ ನೆತ್ತಿ ಸುಡುತ್ತಿದೆ. ಏಪಿಲ್ ತಿಂಗಳಿನಿಂದಲೇ ಆರಂಭದಿಂದಲೇ ಸೂರ್ಯ ತನ್ನ ಪ್ರತಾಪ ತೋರಿಸುತ್ತಿದ್ದಾನೆ. ಅತಿಯಾದ ಬಿಸಿಲು ಮತ್ತು ಸೆಕೆಯಿಂದಾಗಿ ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಅಲ್ಲದೇ ಬಿಸಿಲ ಝಣಕ್ಕೆ ಬೀದರ್​​ನಲ್ಲಿ ಯುವಕನೋರ್ವ ಸಾವನ್ನಪ್ಪಿದ್ದಾನೆ. ಈ ಬಿರು ಬಿಸಿಲ ನಡುವೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

ಬಿರು ಬಿಸಿಲಿನ ನಡುವೆ ರಾಜ್ಯದಲ್ಲಿ ವಾರದವರೆಗೆ ಮಳೆ: ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ತಜ್ಞ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
| Edited By: |

Updated on:Jul 06, 2026 | 10:43 AM

Share

ಬೆಂಗಳೂರು, (ಏಪ್ರಿಲ್ 20): ಕರ್ನಾಟಕದಲ್ಲಿ (Karnataka) ಬಿಸಿಲನ ಆರ್ಭಟ ವಿಪರೀತವಾಗಿದೆ. ಕಲ್ಯಾಣ ಕರ್ನಾಟಕದ (Kalyana Karnataka) ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ದಾಟಿದ್ದು, ಬಿಸಿಲನ ಝಳಕ್ಕೆ ಜನ ಕಂಗಾಲಾಗಿದ್ದಾರೆ. ಇನ್ನು ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ನಾನಾ ಮಾರ್ಗ ಅನುಸರಿಸುತ್ತಿದ್ದಾರೆ. ಈ ಬಿಸಿಲಿನ ಬೇಗೆಯ ನಡುವೆಯೇ ವರುಣನ (Rain) ಆಗಮನದ ಮುನ್ಸೂಚನೆ ಸಿಕ್ಕಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ

ಬೆಂಗಳೂರಿನಲ್ಲಿಂದು ಮಾತನಾಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ಮಾಹಿತಿ ನೀಡಿದ್ದಾರೆ.

ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಹೆಚ್ಚು

ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದೆ. ನಗರದಲ್ಲಿನ ಬಿಸಿಲಿನ ತಾಪಮಾನ ಹಳ್ಳಿ ಭಾಗಗಳಿಗೆ ಹೋಲಿಸಿದರೆ, ಹಳ್ಳಿಗಳಲ್ಲಿ ಬಿಸಿಲಿನ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿದ್ದು, ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡಿದರೆ ಉತ್ತಮ. ತಾಪಮಾನದಿಂದ ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ, ಡ್ಯಾಂ ನೀರು ಆವಿಯಾಗುತ್ತಿದೆ. ಬಿಸಿಲಿಗೆ ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಪ್ರಾಣಿ, ಪಕ್ಷಿ, ಜನರಿಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಹೀಟ್​ಸ್ಟ್ರೋಕ್ ವಾರ್ಡ್ ಸ್ಥಾಪನೆ

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ರಣಬಿಸಿಲಿಗೆ ಸಿಲುಕಿ ಜನ ನರಳಾಡುವಂತಾಗಿದೆ. ತಂಪು ಪಾನಿಯ, ಎಸಿ, ಫ್ಯಾನ್​ಗಳ ಮೊರೆ ಹೋದ್ರೂ ಬಿಸಿ ತಪ್ಪದಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಪ್ರತಿದಿನ 40 ಡಿಗ್ರಿ ದಾಟುತ್ತಿದೆ. ಈ ರಣಬಿಸಿಲಿಗೆ ಸಿಲುಕಿ ಜನ ನರಳಾಡುವಂತಾಗಿದ್ದು, ತಂಪು ಪಾನಿಯ, ಎಸಿ, ಫ್ಯಾನ್​ಗಳ ಮೊರೆ ಹೋದ್ರೂ ಬಿಸಿ ತಪ್ಪದಾಗಿದೆ. ಬಿಸಿಲಿನ ತಾಪಕ್ಕೆ ಜನರಲ್ಲಿ ನಿರ್ಜಲೀಕರಣ, ಹೀಟ್ ಸ್ಟ್ರೋಕ್ ಆಗುವ ಸಾಧ್ಯತೆ ದಟ್ಟವಾಗಿರುತ್ತೆ. ಹೀಗಾಗಿ ಕೆಲ ಜಿಲ್ಲಾ ಆರೋಗ್ಯ ಇಲಾಖೆ ಆಸ್ಪತ್ರೆಯಲ್ಲಿ ಹೀಟ್​ಸ್ಟ್ರೋಕ್ ವಾರ್ಡ್ ಸ್ಥಾಪಿಸಿದೆ. ಬಿಸಿಲಿನಿಂದ ವಾಂತಿ- ಭೇದಿ ಹಾಗೂ ಜ್ವರ ಬರಬಹುದು. ಈ ಲಕ್ಷಣ ಕಾಣಿಸಿಕೊಂಡವರಿಗೆ ಈ ವಾರ್ಡ್ ತೆರೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Mon, 20 April 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ