AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಲ್ಲಿ ವರುಣಾರ್ಭಟ: ಬಿರುಗಾಳಿ ಮಳೆ ಅಬ್ಬರಕ್ಕೆ ಜನ ಕಂಗಾಲು

ಚಿಕ್ಕಮಗಳೂರಲ್ಲಿ ವರುಣಾರ್ಭಟ: ಬಿರುಗಾಳಿ ಮಳೆ ಅಬ್ಬರಕ್ಕೆ ಜನ ಕಂಗಾಲು

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Oct 08, 2026 | 5:34 PM

Share

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆರ್ಭಟಿಸಿದ್ದು, ಮೂಡಿಗೆರೆ ತಾಲೂಕಿನ ಶಾಲೆಯೊಂದರ ಹೆಂಚುಗಳು ಹಾರಿಹೋಗಿವೆ. ಕೆಲವೆಡೆ ರಸ್ತೆಯಲ್ಲಿಯೇ ಮಳೆ ನೀರು ಹರಿದ ಪರಿಣಾಮ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಭಾರಿ ಮಳೆ ಆರ್ಭಟಕ್ಕೆ ಚಿಕ್ಕಮಗಳೂರು ಮಂದಿ ಕಂಗಾಲಾಗಿದ್ದಾರೆ.

ಚಿಕ್ಕಮಗಳೂರು, ಅಕ್ಟೋಬರ್​​ 08: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸಿದ್ದು, ಮೂಡಿಗೆರೆ ತಾಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ವರ್ಷಧಾರೆಯಾಗಿದೆ. ಬಿರುಗಾಳಿ ಆರ್ಭಟಕ್ಕೆ ಜಾಣಿಗೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಹೆಂಚುಗಳು ಹಾರಿ ಹೋಗಿವೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ ಭಾಗದಲ್ಲೂ ವರುಣ ಅಬ್ಬರಿಸಿದ್ದು, ರಸ್ತೆಗಳ ಮೇಲೆಯೇ ಮಳೆ ನೀರು ಹರಿದ ಪರಿಣಾಮ ಕೆಲವೆಡೆ ವಾಹನ ಸಂಚಾರಕ್ಕೂ ಸಮಸ್ಯೆ ಉಂಟಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 08, 2026 05:33 PM

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More