AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಮಳೆ: ಅಧಿಕಾರಿಗಳಿಗೆ ತುರ್ತು ಕ್ರಮಕ್ಕೆ ಸಿಎಂ ಸೂಚನೆ

ಉತ್ತರ ಕರ್ನಾಟಕ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಅದರಲ್ಲೂ ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮತ್ತು ತುರ್ತು ಕ್ರಮಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ.

ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಮಳೆ: ಅಧಿಕಾರಿಗಳಿಗೆ ತುರ್ತು ಕ್ರಮಕ್ಕೆ ಸಿಎಂ ಸೂಚನೆ
ಸಿಎಂ ಸಿದ್ದರಾಮಯ್ಯ
ಗಂಗಾಧರ​ ಬ. ಸಾಬೋಜಿ
|

Updated on: Sep 28, 2025 | 11:44 AM

Share

ಬೆಂಗಳೂರು, ಸೆಪ್ಟೆಂಬರ್​ 28: ಕರ್ನಾಟಕದ ಹಲವೆಡೆ ವರುಣ (rain) ಅಬ್ಬರಿಸುತ್ತಿದ್ದಾನೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಜನರ ಬದುಕೇ ಕೊಚ್ಚಿ ಹೋಗುತ್ತಿದೆ. ಹೀಗಾಗಿ ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ತುರ್ತು ಕ್ರಮಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸುವಂತೆ ಕಲಬುರಗಿ, ವಿಜಯಪುರ, ಯಾದಗಿರಿ ಸೇರಿದಂತೆ ಬೀದರ್ ಜಿಲ್ಲೆಗಳಲ್ಲಿ ಅಗತ್ಯ ತುರ್ತು ಕ್ರಮಕ್ಕೆ ನಾಲ್ಕೂ ಜಿಲ್ಲೆಗಳ ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಬೀದರ್​ನಲ್ಲಿ ಭಾರಿ ಮಳೆಗೆ ವ್ಯಾಪಕ ಬೆಳೆ ಹಾನಿ: ಪರಿಶೀಲನೆಗೆ ಪ್ರವಾಹದ ನೀರಿಗೆ ಇಳಿದೇ ಬಿಟ್ಟ ಶಾಸಕ ಶರಣು ಸಲಗರ!

ಡಿಸಿ ಮತ್ತು ಜಿಲ್ಲಾ ಸಿಇಒಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಬೇಕು. ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು ಎಂದಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ‌ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮಳೆ ಅಬ್ಬರ: ಮನೆಗಳಿಗೆ ನುಗ್ಗಿದ ನೀರು, ಗೋಡೆ ಕುಸಿದು ಅವಾಂತರ, ಇಲ್ಲಿವೆ ಫೋಟೋಸ್​

ಇನ್ನು ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಸಮಸ್ಯೆ ಉಂಟಾಗಿದೆ. ಕೃಷ್ಣ ನದಿಗೆ ಮಹಾರಾಷ್ಟ್ರದ ಉಜನಿ ಹಾಗೂ ನೀರ ಡ್ಯಾಂನಿಂದ ಹೆಚ್ಚಿನ ಪ್ರಮಾಣದ ನೀರು ಹೊರಕ್ಕೆ ಬಿಡಲಾಗಿದೆ. ಇದರಿಂದಾಗಿ ಭೀಮಾ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಕಾರಣ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ. ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ಸಿಎಸ್ ಶಾಲಿನಿ ರಜನೀಶ್ ಹಾಗೂ ಕಲಬುರಗಿ ಡಿಸಿಗೆ ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆ ನೀಡಿದ್ದಾರೆ.

ವರದಿ: ಈರಣ್ಣ ಬಸವ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ