AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಐದು ದಿನದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಳೆ ಆರ್ಭಟ ಮುಂದುವರೆದಿದ್ದು, ಮುಂಜಾಗೃತಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಎರಡು ತಾಲೂಕಿನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 08, 2024 | 9:07 PM

Share

ಮಂಗಳೂರು, ಜುಲೈ 08: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ (Uttara Kannada) ಜಿಲ್ಲೆಗಳಲ್ಲಿ ಕಳೆದ ಐದು ದಿನದಿಂದಲೂ ಎಡೆಬಿಡದೆ ಮಳೆ (Rain) ಸುರಿಯುತ್ತಿದೆ. ಅದ್ರಲ್ಲೂ ಕಳೆದ 24 ಗಂಟೆಗಳಲ್ಲಿ ದೊಡ್ಡ ಪ್ರಮಾಣದ ಮಳೆ ಆಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆ ದಕ್ಷಿಣ ಕನ್ನಡ, ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಶಾಲಾ ಕಾಲೇಜ್​ಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಶಾಲಾ ಕಾಲೇಜಿಗೆ ನಾಳೆ ರಜೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಎರಡು ತಾಲೂಕಿನ ಶಾಲಾ ಕಾಲೇಜ್​ಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದ ಶರಾವತಿ ಮತ್ತು ಗುಂಡಬಾಳ ನದಿ ಉಕ್ಕಿ ಹರಿಯುತ್ತಿವೆ. ಪ್ರವಾಹದಲ್ಲಿ ಸಿಲುಕಿದ್ದ ಕಡತೋಕ ಗ್ರಾಮದ 20ಕ್ಕೂ ಹೆಚ್ಚು ಜನರನ್ನು ಎನ್​ಡಿಆರ್​ಎಫ್​ ತಂಡ ರಕ್ಷಣೆ ಮಾಡಿದೆ.

ಇದನ್ನೂ ಓದಿ: ಉಡುಪಿಯಲ್ಲಿ ಭಾರೀ ಮಳೆ: ನೀರಿನಲ್ಲಿ ಕೊಚ್ಚಿ ಹೋದ ಕಾರು, ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಮಳೆಯ ಅಬ್ಬರಕ್ಕೆ 2 ಮನೆಗಳು ತೀವ್ರ ಹಾನಿಯಾಗಿದ್ದು, 13 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಜಿಲ್ಲೆಯಾದ್ಯಂತ 8 ಕಾಳಜಿ ಕೇಂದ್ರಗಳಲ್ಲಿ 313 ಜನರಿಗೆ ಆಶ್ರಯ ನೀಡಲಾಗಿದೆ. ಕಳೆದ 24 ಗಂಟೆಯಲ್ಲಿ 87.3 ಮಿ.ಮೀ ಮಳೆ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಹಾಗಾಗಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.

ಇದನ್ನೂ ಓದಿ: ಉಡುಪಿಯಲ್ಲಿ ಪ್ರವಾಹ; ಹೆಗಲ ಮೇಲೆ ಹೊತ್ತು ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ನದಿ, ಸಮುದ್ರ ತೀರದ ಜನ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.