Karnataka Weather: ಕರ್ನಾಟಕದಾದ್ಯಂತ ಆಗಸ್ಟ್ 20ರಿಂದ ಮುಂಗಾರು ಚುರುಕು, ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಆಗಸ್ಟ್​ 20ರಿಂದ ಮುಂಗಾರು ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಹೆಚ್ಚಾಗಲಿದೆ.

Karnataka Weather: ಕರ್ನಾಟಕದಾದ್ಯಂತ ಆಗಸ್ಟ್ 20ರಿಂದ ಮುಂಗಾರು ಚುರುಕು, ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಮಳೆ
Image Credit source: Firstpost

Updated on: Aug 16, 2023 | 7:39 AM

ಕರ್ನಾಟಕದಾದ್ಯಂತ ಆಗಸ್ಟ್​ 20ರಿಂದ ಮುಂಗಾರು ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಹೆಚ್ಚಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಆಗಸ್ಟ್ 20ರ ನಂತರ ಮಳೆಯಾಗಲಿದೆ.

ಮುನಿರಾಬಾದ್, ಹೊಸಪೇಟೆ, ರಾಯಚೂರು, ಸಿಂಧನೂರಿನಲ್ಲಿ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದ್ದರೂ ವಾಡಿಕೆ ಪ್ರಮಾಣದ ಮಳೆಯಾಗುತ್ತಿಲ್ಲ. ಕಳೆದ ನಾಲ್ಕೈದು ವರ್ಷಗಳಿಂದ ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಈ ವರ್ಷ ಮುಂಗಾರು ದುರ್ಬಲಗೊಂಡು ಮಳೆ ಕೊರತೆ ಎದುರಿಸುವಂತಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ

ಜುಲೈನಲ್ಲಿ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ ಮತ್ತೆ ಮಳೆ ಅಭಾವ ಕಾಡುತ್ತಿದೆ, ಬಿತ್ತಿದ ಬೆಳೆಗಳಿಗೆ ಮಳೆ ಕೊರತೆ ಉಂಟಾಗಿದ್ದು, ಬಹಳಷ್ಟು ಕಡೆಗಳಲ್ಲಿ ಫಸಲು ಒಣಗುತ್ತಿವೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕಳೆದ ಒಂದು ವಾರದಲ್ಲಿ ಶೇ.70ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಈ ವಾರದಲ್ಲಿ 56.3 ಮಿ.ಮೀ. ವಾಡಿಕೆ ಮಳೆ ಪ್ರಮಾಣವಿದೆ. ಆದರೆ, ಕೇವಲ 16.8 ಮಿ.ಮೀ.ನಷ್ಟು ಮಳೆಯಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us