Karnataka Rain: ಜೂನ್ 11ರಂದು ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅಧಿಕ ಮಳೆ ಸಾಧ್ಯತೆ
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 11 ರಂದು ಒಳನಾಡಿನಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 11 ರಂದು ಒಳನಾಡಿನಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ತುಮಕೂರಿನಲ್ಲಿ ಅಧಿಕ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಶಿರಾಲಿ, ಕಾರವಾರ, ಕುಮಟಾ, ಚನ್ನರಾಯಪಟ್ಟಣ, ನಾಯಕನಹಟ್ಟಿ, ಮಧುಗಿರಿ, ತುಮಕೂರಿನಲ್ಲಿ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35-45 ಕಿ.ಮೀಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 40.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಇಂದಿನಿಂದ 3 ದಿನ 4 ರಾಜ್ಯಗಳಲ್ಲಿ ಭಾರಿ ಮಳೆ
ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಇತ್ತೀಚೆಗೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿ, ವಾಯುಭಾರ ಕುಸಿತವಾಗಿತ್ತು. ಇದೀಗ ಅದು ಇನ್ನಷ್ಟು ತೀವ್ರಗೊಂಡು ‘ಬಿಪರ್‌ಜಾಯ್’ ಚಂಡಮಾರುತವಾಗಿ ಬದಲಾಗಿದೆ.
ಗುಜರಾತ್ ಕರಾವಳಿ ತೀರದ ಪ್ರದೇಶಗಳು, ಮುಂಬೈ, ಪುಣೆ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆ ಸುರಿಯಲಿದೆ. ಅದೇ ರೀತಿ ಕರ್ನಾಟಕದಲ್ಲೂ ವಿವಿಧೆಡೆ ಜೋರು ಮಳೆ ಬರಲಿದೆ.
ಕರ್ನಾಟಕದಲ್ಲಿ ಮುಂದಿನ ಅಂದರೆ ಜೂನ್ 11 ರವರೆಗೆ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬರಲಿದೆ. ಈ ಪೈಕಿ ಕೊನೆಯ ಎರಡು ದಿನ ಜೂನ್ 10 ಮತ್ತು 12ರಂದು ಬಳ್ಳಾರಿ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆ ಅಬ್ಬರಿಸಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ಕೊಡಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ