Karnataka Weather: ಜೂನ್ 4ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.

Karnataka Weather: ಜೂನ್ 4ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
ಮಳೆImage Credit source: BQ PRIME
Follow us
ನಯನಾ ರಾಜೀವ್
|

Updated on: Jun 02, 2023 | 7:24 AM

ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.

ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಗಾರು ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.

ಮತ್ತಷ್ಟು ಓದಿ: Karnataka Rains: ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಶಿಗ್ಗಾಂವಿ, ತರೀಕೆರೆ, ಸುಬ್ರಹ್ಮಣ್ಯ, ಮಂಚಿಕೆರೆ, ಲೋಂಡಾ, ಸವಣೂರು, ಕಡೂರು, ಬಾಳೆಹೊನ್ನೂರು, ಸುತ್ತೂರು, ಆನವಟ್ಟಿ, ಶಿವಮೊಗ್ಗ, ಮಲವಳ್ಳಿ, ಲೋಕಾಪುರ, ಸಂಕೇಶ್ವರ, ಹಾವೇರಿ, ಗದಗ, ಮುದಗಲ್, ಧಾರವಾಡ, ಕೆಂಭಾವಿ, ಚನ್ನಗಿರಿ, ರಾಮನಗರ, ಅಜ್ಜಂಪುರ, ಮದ್ದೂರು, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ಯಾವುದೇ ಸಂದರ್ಭದಲ್ಲಿ ಮಳೆಯಾಗಬಹುದು ಎಂದು ನಿರೀಕ್ಷಿಲಾಗಿದೆ. ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್