Karnataka Weather: ಜೂನ್ 4ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.

Karnataka Weather: ಜೂನ್ 4ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
ಮಳೆ
Image Credit source: BQ PRIME

Updated on: Jun 02, 2023 | 7:24 AM

ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.

ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಗಾರು ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.

ಮತ್ತಷ್ಟು ಓದಿ: Karnataka Rains: ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಶಿಗ್ಗಾಂವಿ, ತರೀಕೆರೆ, ಸುಬ್ರಹ್ಮಣ್ಯ, ಮಂಚಿಕೆರೆ, ಲೋಂಡಾ, ಸವಣೂರು, ಕಡೂರು, ಬಾಳೆಹೊನ್ನೂರು, ಸುತ್ತೂರು, ಆನವಟ್ಟಿ, ಶಿವಮೊಗ್ಗ, ಮಲವಳ್ಳಿ, ಲೋಕಾಪುರ, ಸಂಕೇಶ್ವರ, ಹಾವೇರಿ, ಗದಗ, ಮುದಗಲ್, ಧಾರವಾಡ, ಕೆಂಭಾವಿ, ಚನ್ನಗಿರಿ, ರಾಮನಗರ, ಅಜ್ಜಂಪುರ, ಮದ್ದೂರು, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ಯಾವುದೇ ಸಂದರ್ಭದಲ್ಲಿ ಮಳೆಯಾಗಬಹುದು ಎಂದು ನಿರೀಕ್ಷಿಲಾಗಿದೆ.
ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us