Karnataka Weather: ಸೆಪ್ಟೆಂಬರ್ 6ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

|

Updated on: Aug 29, 2023 | 7:25 AM

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಸೆಪ್ಟೆಂಬರ್ 6ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಮಳೆ
Image Credit source: The News Minute
Follow us on

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ತಿಪಟೂರು, ಕೃಷ್ಣರಾಜಪೇಟೆ, ಕೃಷ್ಣರಾಜಸಾಗರ, ಮೈಸೂರು, ಯಲಬುರ್ಗಾದಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಹಲವೆಡೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ, ಹಾಗೂ ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಭಾರತದ ಈಶಾನ್ಯ, ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿ ಗುರುವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಅಸ್ಸಾಂ ಮತ್ತು ಮೇಘಾಲಯದ ಕೆಲವು ಭಾಗಗಳಲ್ಲಿ ಆಗಸ್ಟ್ 29-31 ರವರೆಗೆ ಭಾರೀ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮತ್ತಷ್ಟು ಓದಿ: Karnataka Rain: ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಚುರುಕು, ಸೆಪ್ಟೆಂಬರ್ 5ರವರೆಗೆ ಈ ಜಿಲ್ಲೆಗಳಲ್ಲಿ ಮಳೆ

ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ತ್ರಿಪುರಾ, ಮಿಜೋರಾಂ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಆಗಸ್ಟ್ 29-31 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ವಾರದವರೆಗೆ ದೇಶದ ಉಳಿದ ಭಾಗಗಳಲ್ಲಿ ಕಡಿಮೆ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ಕರ್ನಾಟಕದ ದಕ್ಷಿಣ ಒಳಭಾಗ, ಪುದುಚೇರಿ, ಕಾರೈಕಲ್, ಯಾನಂ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಆಗಸ್ಟ್​ 29ರಂದು ಮಳೆಯಾಗಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ