Karnataka Rains: ಇಂದು ಕರ್ನಾಟಕದ ಕರಾವಳಿಯಲ್ಲಿ ಮಹಾ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಇಂದು ಕರ್ನಾಟಕದ ಕರಾವಳಿಯಲ್ಲಿ ಮಹಾ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​ ಘೋಷಣೆ
ಮಳೆ
Image Credit source: News 9

Updated on: Jul 14, 2023 | 7:42 AM

ಕರ್ನಾಟಕದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಲ್ಲೂರು, ಸಿದ್ದಾಪುರ, ಗೇರುಸೊಪ್ಪ, ಮಂಕಿ, ಕದ್ರಾ, ಕೋಟ, ಪಣಂಬೂರು, ಲಿಂಗನಮಕ್ಕಿ, ಶಿರಾಲಿ, ಉಡುಪಿ, ಕುಂದಾಪುರ, ಮಂಗಳೂರು, ತಾಳಗುಪ್ಪ, ಶೃಂಗೇರಿ, ಸಿದ್ದಾಪುರ, ಹೊನ್ನಾವರ, ಕಾರ್ಕಳ, ಮಂಗಳೂರು, ಹುಂಚದಕಟ್ಟೆ, ಮಾಣಿ, ಮುಲ್ಕಿ, ಕುಮಟಾ, ಔರಾದ್, ಕಮ್ಮರಡಿ, ಉಪ್ಪಿನಂಗಡಿ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಅಂಕೋಲಾ, ಗೋಕರ್ಣ, ಸಂತಪುರ, ಜಯಪುರ, ಜಾನ್ಮನೆ, ಬೇಲಿಕೇರಿ, ಕ್ಯಾಸಲ್ ರಾಕ್, ತಾವರಗೇರಾ, ಕಳಸ, ಕೊಪ್ಪ, ತುಮಕೂರು, ತ್ಯಾಗರ್ತಿ, ಮಂಚಿಕೆರೆ, ಧರ್ಮಸ್ಥಳ, ಗಂಗಾವತಿ, ಗುಂಜಿ, ಗುಂಡಗುರ್ತಿ, ರಾಯಚೂರು, ಪಿಟಿಐ, ಕಂಪ್ಲಿ, ಮಂಡಗದ್ದೆ, ತೊಂಡೆಭಾವಿ, ಸಕಲೇಶಪುರ, ಸುಬ್ರಹ್ಮಣ್ಯ, ಬನವಾಸಿ, ಬೀದರ್, ಭಾಲ್ಕಿ, ಬೀದರ್, ಸಿಂಧನೂರು, ದೇವದುರ್ಗ, ಲೋಂಡಾ, ಗುಬ್ಬಿ, ಮಧುಗಿರಿ, ಸುಂಟಿಕೊಪ್ಪ, ನಾಪೋಕ್ಲು, ಸೋಮವಾರಪೇಟೆ, ಶನಿವಾರಸಂತೆ, ಬೆಂಗಳೂರು ನಗರ, ಮೂಡಿಗೆರೆ, ಬೆಂಗಳೂರು ನಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 19ರವರೆಗೂ ಭಾರಿ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆ ಮಳೆಯಾಗಲಿದೆ.ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us