Karnataka Weather: ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಬಿಸಿಲು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಿದ್ದು, ಬಿಸಿಲ ಝಳ ಹೆಚ್ಚಾಗಿದೆ, ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಗೋಕರ್ಣ, ಶಿರಾಲಿಯಲ್ಲಿ ಮಳೆಯಾಗಿದೆ.

Karnataka Weather: ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಬಿಸಿಲು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಳೆ
Follow us
ನಯನಾ ರಾಜೀವ್
|

Updated on:Aug 25, 2023 | 7:26 AM

ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಿದ್ದು, ಬಿಸಿಲ ಝಳ ಹೆಚ್ಚಾಗಿದೆ, ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಮಂಡ್ಯ, ಶಿವಮೊಗ್ಗದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ. ಗೋಕರ್ಣ, ಶಿರಾಲಿಯಲ್ಲಿ ಮಳೆಯಾಗಿದೆ.

ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಬೆಂಗಳೂರಿನಲ್ಲಿ ಬೆಳಗ್ಗೆ ಸೂರ್ಯ ಕಾಣಿಸಿಕೊಳ್ಳಲಿದ್ದು, ನಂತರದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ, ಸಂಜೆ ವೇಳೆ ಹಗುರ ಮಳೆಯಾಗುವ ನಿರೀಕ್ಷೆ ಇದೆ.

ಎಚ್​ಎಎಲ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್​ 30ರವರೆಗೆ ಮಳೆ

ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಗುರುವಾರ ಭಾರೀ ಭೂಕುಸಿತ ಸಂಭವಿಸಿದ್ದು, ಹಲವಾರು ಮನೆಗಳು ಕುಸಿದಿವೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಂತಹ ಎತ್ತರದ ಪ್ರದೇಶಗಳ ಮೇಲೆ ಬಲವಾದ ಮಳೆಯು ಪರಿಣಾಮ ಬೀರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಹಾನಿಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಪ್ರಕಾರ ಮುಂದಿನ ಎರಡು ದಿನ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಬಿಹಾರದಲ್ಲಿ ಭಾರೀ ಮಳೆಯಿಂದ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:26 am, Fri, 25 August 23