Karnataka Rain: ಕರ್ನಾಟಕದ ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸೆ.3ರವರೆಗೆ ಮಳೆ

ಕರ್ನಾಟಕದ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸೆಪ್ಟೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ,ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Karnataka Rain: ಕರ್ನಾಟಕದ ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸೆ.3ರವರೆಗೆ ಮಳೆ
ಮಳೆ
Image Credit source: India.com

Updated on: Aug 27, 2023 | 7:53 AM

ಕರ್ನಾಟಕದ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸೆಪ್ಟೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ,ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಲೋಕಾಪುರ, ಕುಮಟಾ, ಕೂಡಲಸಂಗಮ, ಕ್ಯಾಸಲ್ ರಾಕ್, ಕಾರವಾರ, ನಿಪ್ಪಾಣಿ, ಕೆರೂರು, ಬಾದಾಮಿ, ದಾವಣಗೆರೆ, ಹಳಿಯಾಳ, ಶಿರಾಲಿ, ಕದ್ರಾ, ಮುಂಡಗೋಡ, ಗೋಕರ್ಣ, ಜೋಯಿಡಾ, ಚಿಕ್ಕೋಡಿ, ಸೇಡಬಾಳ, ಗೋಕಾಕ, ಸಂಕೇಶ್ವರ, ಬೈಲಹೊಂಗಲ, ದೇವದುರ್ಗ, ಕಲಬುರಗಿ, ಸೇಡಂ,ಕವಡಿಮಟ್ಟಿ, ಶಹಾಪುರ, ಹುಣಸಗಿ, ಬಾಗಲಕೋಟೆಯಲ್ಲಿ ಮಳೆಯಾಗಿದೆ.

ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಸೆಕೆ ಇದೆ, ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಬಿಸಿಲು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ (IMD) ದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ಬಿಹಾರದಾದ್ಯಂತ ಇಡೀ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us