Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್​ 27ರವರೆಗೆ ಮಳೆ ಸಾಧ್ಯತೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್​ 27ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್​ 27ರವರೆಗೆ ಮಳೆ ಸಾಧ್ಯತೆ
ಮಳೆ

Updated on: Aug 21, 2023 | 7:33 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್​ 27ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮಂಗಳೂರು ವಿಮಾನ ನಿಲ್ದಾಣ, ಕಾರ್ಕಳ, ಮಂಕಿ, ಮಾಣಿ, ಉಡುಪಿ, ಉಪ್ಪಿನಂಗಡಿ, ಕೋಟ, ಕುಂದಾಪುರ, ಗೇರುಸೊಪ್ಪ, ಪುತ್ತೂರು, ಹೊನ್ನಾವರ, ಕದ್ರಾ, ಸಿದ್ದಾಪುರ, ಮಂಗಳೂರು, ಶೃಂಗೇರಿ, ಕೊಟ್ಟಿಗೆಹಾರ, ರಾಯಲ್ಪಾಡು, ಜಯಪುರ, ಕಳಸ, ಸುಳ್ಯ, ಬಸವರಾಯನ ದುರ್ಗ, ಕೊಲ್ಲೂರು, ಭಾಗಮಂಡಲ, ಪೊನ್ನಂಪೇಟೆ, ನಾಓಕ್ಲು, ಕಿರವತ್ತಿ, ಶಿರಾಲಿ, ಮಂಠಾಳ, ಲೋಂಡಾ, ಭಾಗಮಂಡಲ, ಪೊನ್ನಂಪೇಟೆ, ಸೋಮವಾರಪೇಟೆ, ಬಾಳೆಹೊನ್ನೂರು, ಹುಣಸೂರು, ಹುಂಚದಕಟ್ಟೆ, ಹಾಸನ, ಬೇಲೂರು, ಯಲ್ಲಾಪುರ, ಹಳಿಯಾಳ, ಅಂಕೋಲಾ, ಕುಮಟಾ, ಗಂಗಾವತಿ, ಚಿಂಚೋಳಿ, ಸಿಂದಗಿ, ಬೇವೂರು, ಅಣ್ಣಿಗೆರೆ, ಹುಮನಾಬಾದ್, ತುಮಕೂರು, ಕೊಪ್ಪ, ಕಮ್ಮರಡಿ, ಮಾಲೂರು, ಟಿ ನರಸೀಪುರ, ಚಿಕ್ಕನಹಳ್ಳಿ, ಸಂತೆಬೆನ್ನೂರು, ತಾಳಗುಪ್ಪ, ಆನವಟ್ಟಿ, ಬೆಂಗಳೂರು ಎಚ್​ಎಎಲ್​, ಬೆಂಗಳೂರು ನಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಮುಂದಿನ ಒಂದು ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ

ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ,ಕ್ಯಾಸಲ್​ರಾಕ್, ಕಾರ್ಕಳ, ಮಂಕಿ, ಮಾಣಿ, ಉಡುಪಿಯಲ್ಲಿ ಭಾರಿ ಮಳೆಯಾಗಿದೆ.
ನೈಋತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುಡಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us