Karnataka Weather: ಕರ್ನಾಟಕದಲ್ಲಿ ಮುಂಗಾರು ದುರ್ಬಲ, ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಮಳೆ
ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ದಿನಕ್ಕೆ ಒಂದೋ ಎರಡೋ ಬಾರಿ ಮಳೆ ಸುರಿಯುತ್ತಿದೆ. ಈ ಬಾರಿ ಮುಂಗಾರು ಆಗಮನ ತಡವಾಗಿತ್ತು.
ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ದಿನಕ್ಕೆ ಒಂದೋ ಎರಡೋ ಬಾರಿ ಮಳೆ ಸುರಿಯುತ್ತಿದೆ. ಈ ಬಾರಿ ಮುಂಗಾರು ಆಗಮನ ತಡವಾಗಿತ್ತು. ಕೆಲವೇ ದಿನಗಳು ಮಾತ್ರ ಭಾರಿ ಮಳೆಯಾಗಿತ್ತು. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಟಿ ನರಸೀಪುರ, ಬಳ್ಳಾರಿ, ಉಪ್ಪಿನಂಗಡಿ, ಕೆಂಭಾವಿ, ಕುರ್ಡಿ, ಕೊಟ್ಟಿಗೆಹಾರ, ಕೆಆರ್ ಸಾಗರ, ಕುಡುಗೋಡು, ಕೂಡ್ಲಿಗಿ, ಸುಳ್ಯ, ಕದ್ರಾ, ಯಲ್ಲಾಪುರ, ಮಳವಳ್ಳಿ, ಹೊಸಪೇಟೆ, ಹಡಗಲಿ, ಮಂಡ್ಯದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಆಗಸ್ಟ್ 16ರವರೆಗೆ ಮಳೆ
ಕರಾವಳಿಯ ಕೆಲವು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ-ಗುಡುಗು ಸಹಿತ ಮಲೆಯಾಗುವ ಸಾಧ್ಯತೆ ಇದೆ.
ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ, ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸ್ವಲ್ಪ ಬಿಸಿಲು ಕೂಡ ಕಾಣಿಸಿಕೊಳ್ಳುತ್ತಿದೆ. ಎಚ್ಎಎಲ್ನಲ್ಲಿ 30.41 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ