Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 16ರವರೆಗೆ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 16ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಮುಂದಿನ 6 ದಿನ ಅತಿ ಹೆಚ್ಚು ಮಳೆಬೀಳಲಿದೆ.  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 16ರವರೆಗೆ ಮಳೆ
ಮಳೆ
Image Credit source: Jagaran English

Updated on: Sep 10, 2023 | 8:01 AM

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 16ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಮುಂದಿನ 6 ದಿನ ಅತಿ ಹೆಚ್ಚು ಮಳೆಬೀಳಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕೋಟ, ಶಿರಾಲಿ, ಕ್ಯಾಸಲ್​ರಾಕ್, ಸುಳ್ಯ, ಭಾಗಮಂಡಲ, ಪೊನ್ನಂಪೇಟೆ, ಸಿದ್ದಾಪುರ, ಕೊಲ್ಲೂರು, ಪುತ್ತೂರು, ಕಮ್ಮರಡಿ, ನಾಪೋಕ್ಲು, ಅಂಕೋಲಾ, ಗೇರುಸೊಪ್ಪ, ಕದ್ರಾ, ಮಾಣಿ, ಬೆಳ್ತಂಗಡಿ, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಕಾರ್ಕಳ, ಕಾರವಾರ, ಖಜೂರಿ, ಲಿಂಗನಮಕ್ಕಿ, ಶೃಂಗೇರಿ, ಮಂಚಿಕೆರೆ, ಗೋಕರ್ಣ, ಕುಮಟಾ, ಜೋಯಿಡಾ, ಹೊನ್ನಾವರ, ಮಂಗಳೂರು, ಧರ್ಮಸ್ಥಳ, ಉಪ್ಪಿನಂಗಡಿ, ಲೋಂಡಾ, ಕಮಲಾಪುರ, ಎನ್​ಆರ್​ ಪುರ, ಕೊಪ್ಪ. ಜಯಪುರ, ಕೊಟ್ಟಿಗೆಹಾರ, ಮಡಿಕೇರಿ, ಸೋಮವಾರಪೇಟೆ, ಸಕಲೇಶಪುರ, ತಾಳಗುಪ್ಪದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ನೈಋತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು, ಆದರೆ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ಅಥವಾ ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:00 am, Sun, 10 September 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us