Karnataka Rains: ಆಗಸ್ಟ್ 14ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 14ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಆಗಸ್ಟ್ 14ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ
ಮಳೆ

Updated on: Aug 08, 2023 | 7:40 AM

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 14ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಂಕಿ, ಸುಳ್ಯ, ಶಿರಾಲಿ, ಗೇರುಸೊಪ್ಪ, ಕದ್ರಾ, ಮಂಚಿಕೆರೆ, ಕ್ಯಾಸಲ್​ ರಾಕ್, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸಿದ್ದಾಪುರ, ಜೋಯ್ಡಾ, ಭಾಗಮಂಡಲ, ಲಿಂಗನಮಕ್ಕಿ, ಜಿಕೆವಿಕೆ, ಗುಬ್ಬಿಯಲ್ಲಿ ಮಳೆಯಾಗಿದೆ.

ರಾಜ್ಯಾದ್ಯಂತ ನೈಋತ್ಯ ಮುಂಗಾರು ದುರ್ಬಲವಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಆಗಾಗ ಬಿಸಿಲು ಕಾಣಿಸಿಕೊಳ್ಳುತ್ತಿದೆ, ಬೆಳಗ್ಗೆ ಸಮಯದಲ್ಲಿ ಸ್ವಲ್ಪ ಚಳಿಯೂ ಕಂಡುಬರುತ್ತಿದೆ.

ಮತ್ತಷ್ಟು ಓದಿ:Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆ

ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us