Karnataka Rain: ನವೆಂಬರ್ 19ರಿಂದ 3 ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ನವೆಂಬರ್ 19ರಿಂದ 3 ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rain: ನವೆಂಬರ್ 19ರಿಂದ 3 ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆ

Updated on: Nov 15, 2023 | 7:26 AM

ನವೆಂಬರ್ 19ರಿಂದ 3 ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ರಾಜ್ಯಾದ್ಯಂತ ಒಣಹವೆ ಇದೆ, ವಿಜಯಪುರದಲ್ಲಿ 15.5 ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 16ರಿಂದ ಎರಡು ದಿನ ಮಳೆ, ಉಳಿದೆಡೆ ಒಣಹವೆ

ಎಚ್​ಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us