Karnataka Rain: ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಮುಂದುವರಿಕೆ: ಹವಾಮಾನ ಇಲಾಖೆ

| Updated By: ವಿವೇಕ ಬಿರಾದಾರ

Updated on: Jul 24, 2022 | 2:26 PM

ರಾಜ್ಯದಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಮುಂದುವರಿಕೆ: ಹವಾಮಾನ ಇಲಾಖೆ
ಮಳೆ
Follow us on

ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಮುಂದಿನ 48 ಗಂಟೆಗಳಲ್ಲಿ ಹೆಚ್ಚು‌ ಮಳೆಯಾಗುವ ಸಾಧ್ಯಾತೆ ಇದೆ.