Karnataka Rains: ಬೆಳಗಾವಿ, ಬಾಗಲಕೋಟೆ, ಮೈಸೂರು ಹಾಗೂ ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Karnataka Rains: ಬೆಳಗಾವಿ, ಬಾಗಲಕೋಟೆ, ಮೈಸೂರು ಹಾಗೂ ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
ಮಳೆ

Updated on: May 11, 2023 | 8:00 AM

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ರಾಣೆಬೆನ್ನೂರು, ಹಳಿಯಾಳ, ಆಳಂದ, ಬಾಳೆಹೊನ್ನೂರು, ಶಿವನಿ, ಎನ್​ಆರ್​ಪುರ, ಚನ್ನರಾಯಪಟ್ಟಣ, ಹುಂಚದಕಟ್ಟೆ, ಟಿ ನರಸೀಪುರ, ಮಂಠಾಳ, ಶಿಗ್ಗಾಂವ್, ರಬಕವಿ, ಭಾಲ್ಕಿ, ಅಣ್ಣಿಗೆರೆ, ಚಿಕ್ಕಮಗಳೂರು, ಕೊಳ್ಳೇಗಾಲ, ಭಾಗಮಂಡಲ, ಲಕ್ಷ್ಮೇಶ್ವರ, ಗದಗ, ಕಳಸ, ಅಜ್ಜಂಪುರ, ಆನವಟ್ಟಿ, ಪೊನ್ನಂಪೇಟೆ, ಬೆಳ್ಳೂರು, ತಿಪಟೂರು, ಬಂಡೀಪುರ, ಶಿವಮೊಗ್ಗ, ಚಾಮರಾಜನಗರ, ಬನವಾಸಿ, ಜೇವರ್ಗಿ, ಖಜೂರಿ, ಧಾರವಾಡ, ಹಾನಗಲ್, ಕುಂದಗೋಳ, ಸೈದಾಪುರ, ಬಸವನ ಬಾಗೇವಾಡಿ, ಕಲಬುರಗಿ, ಸಂಕೇಶ್ವರ, ಶ್ರವಣಬೆಳಗೊಳ, ದಾವಣಗೆರೆ, ಸೋಮವಾರಪೇಟೆ, ಹೆಸರಘಟ್ಟ, ರಾಮನಗರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಸಂಜೆ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಳೆಯಾಗುವ ಸಾಧ್ಯತೆ ಇದೆ.
ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆಯ ಎಚ್ಚರಿಕೆ

ರಾಮನಗರ, ಕೋಲಾರ, ಯಾದಗಿರಿ, ತುಮಕೂರಿನ ಹಲವಡೆಯೂ ಮಳೆ ಆಗಿದೆ. ಬೀದರ್, ರಾಯಚೂರು, ವಿಜಯಪುರ, ಬಳ್ಳಾರಿ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರಿನ ಅಲ್ಲಲ್ಲಿ ಮಳೆ ಆಗುವ ಸಂಭವ ಇದೆ. ಕಲಬುರಗಿಯಲ್ಲಿ 37.3 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us