ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದಲ್ಲಿ ಬಾರಿ ಶಖೆ. ಈ ನಡುವೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ವಿಪರೀತ ಮಳೆಗೆ (Rain) ರೈತರು ಬೆಳೆದ ಬೆಳೆ ನಾಶವಾಗುತ್ತಿದ್ದು, ರೈತರು (Farmers) ಕಂಗಾಲಾಗಿದ್ದಾರೆ. ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆಗೆ ಬೆಳೆ ನೆಲ ಕಚ್ಚಿದೆ. 20 ಎಕರೆಗೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಹಾನಿಯಾಗಿದೆ. ಚಾಮರಾಜನಗರ ತಾಲೂಕು ಮಲೆಯೂರು, ಮುಕ್ಕಡಹಳ್ಳಿ, ಹಿರೇಬೇಗೂರು ಸುತ್ತಮುತ್ತ ಸುರಿದ ಮಳೆಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.
ಇನ್ನು ಹುಬ್ಬಳ್ಳಿಯಲ್ಲಿ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಗ್ರಾಮಸ್ಥರು ಪರದಾಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ಮಳೆಗೆ ಮನೆಗಳು ಹಾನಿಯಾಗಿವೆ. ಭಾರಿ ಗಾಳಿಯಿಂದ ಸುಮಾರು 25 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಯ ಮೇಲ್ಚಾವಣಿ ಹಾರಿ ಹೋಗಿದ್ದು, ಕೆಲ ಮನೆಗಳು ಕುಸಿದಿವೆ. ಅಕಾಲಿಕ ಮಳೆಗೆ ಗ್ರಾಮಸ್ಥರು ಕಂಗಾಲಾಗಿದ್ದಾರೆ.
5 ದಿನ ಮಳೆ ಸಾಧ್ಯತೆ:
ಈಗಾಗಲೇ ಬೇಸಿಗೆ ಶುರುವಾಗಿದೆ. ಅದರಲ್ಲೂ ಉತ್ತರ ಭಾರತದಲ್ಲಂತೂ ತೀರ ಒಣಹವೆ. ಈ ಮಧ್ಯೆ ಮತ್ತೆ ಮುಂದಿನ ಐದು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಉಷ್ಣಅಲೆ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ದೇಶದ ಉತ್ತರ ಮತ್ತು ಪಶ್ಚಿಮದ ಹಲವು ರಾಜ್ಯಗಳು ಪ್ರದೇಶಗಳಲ್ಲಿ ಬಿರುಬಿಸಿಲು ಶುರುವಾಗಿದ್ದು, ಸೌರಾಷ್ಟ್ರ-ಕಚ್ ಸೇರಿ ಇನ್ನೂ ಅನೇಕ ಪ್ರದೇಶಗಳಲ್ಲಿ ಮಾರ್ಚ್ 31ರವರೆಗೂ ಉಷ್ಣ ಗಾಳಿ ಇರಲಿದೆ ಎಂದು ಐಎಂಡಿ (IMD) ತಿಳಿಸಿದೆ.
ಮಳೆ ಮುನ್ಸೂಚನೆ:
ಈ ಮಧ್ಯೆ ಭಾರತದ ಈಶಾನ್ಯ ಮತ್ತು ದಕ್ಷಿಣ ಪರ್ಯಾಯ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ತಜ್ಞರು ತಿಳಿಸಿದ್ದಾರೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿ ಹಲವೆಡೆ ಚದುರಿದ ಮಳೆಯಾಗಬಹುದು. ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಮಳೆಯೂ ಬರಬಹುದು ಎಂದೂ ಹೇಳಿದೆ.
ಇದನ್ನೂ ಓದಿ
ಬೆಂಗಳೂರಿನಿಂದ ಚೆನ್ನೈ ಸಂಪರ್ಕಿಸಿರೋ ಎಕ್ಸ್‌ಪ್ರೆಸ್ ಹೈವೇ ಕಾಮಗಾರಿಯಿಂದಾಗಿ ಕಾಡು ಪ್ರಾಣಿಗಳಿಗೆ ಎದುರಾಯ್ತು ಸಂಕಷ್ಟ
ಯೋಗ ಮಾಡುವಾ ನಿಮಗೆ ಆಗಾಗ್ಗೆ ತಲೆತಿರುಗುವುದು ಏಕೆ ಗೊತ್ತಾ? ಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಿ
Published On - 9:05 am, Mon, 28 March 22