AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಲ್ಲಿ ಶೇ 23 ರಷ್ಟು ಮಳೆ ಕೊರತೆ; ಹವಾಮಾನ ಇಲಾಖೆ

ಜೂನ್ 1 ರಿಂದ ಜುಲೈ 19ರ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಶೇ 7 ಮತ್ತು ಬೆಂಗಳೂರು ನಗರದಲ್ಲಿ ಶೇ 17 ರಷ್ಟು ಅಧಿಕ ಮಳೆ ದಾಖಲಾಗಿದೆ.

Karnataka Rains: ಕರ್ನಾಟಕದಲ್ಲಿ ಶೇ 23 ರಷ್ಟು ಮಳೆ ಕೊರತೆ; ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Jul 20, 2023 | 10:21 PM

Share

ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ ಜೂನ್ 1 ರಿಂದ ಜುಲೈ 19 ರವರೆಗೆ 27.3 ಸೆಂ.ಮೀ ಮಳೆಯಾಗಿದೆ (Karnataka Rains). ಸಾಮಾನ್ಯವಾಗಿ ಈ ಅವಧಿಯಲ್ಲಿ 35.35 ಸೆಂ.ಮೀ ಮಳೆಯಾಗುತ್ತಿದೆ. ಈ ವರ್ಷ ಶೇ 23 ರಷ್ಟು ಮಳೆ ಕೊರತೆಯಾಗಿದೆ ಎಂಬುದು ಹವಾಮಾನ ಇಲಾಖೆ (IMD) ದತ್ತಾಂಶಗಳಿಂದ ತಿಳಿದುಬಂದಿದೆ. ಹವಾಮಾನ ಇಲಾಖೆಯ ದತ್ತಾಂಶಗಳ ಪ್ರಕಾರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಆದರೆ, ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಕೊರತೆ ವರದಿಯಾಗಿದ್ದು, ನಂತರದ ಸ್ಥಾನದಲ್ಲಿ ಹಾಸನ, ರಾಮನಗರ ಮತ್ತು ಶಿವಮೊಗ್ಗ ಮತ್ತು ಬಾಗಲಕೋಟೆ ಇವೆ.

ಜೂನ್ 1 ರಿಂದ ಜುಲೈ 19ರ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಶೇ 7 ಮತ್ತು ಬೆಂಗಳೂರು ನಗರದಲ್ಲಿ ಶೇ 17 ರಷ್ಟು ಅಧಿಕ ಮಳೆ ದಾಖಲಾಗಿದೆ.

ಕೆಲವು ಪ್ರದೇಶಗಳಲ್ಲಿ ಮಳೆಯ ಕೊರತೆಯನ್ನು ಗಮನಿಸಿರುವ ರಾಜ್ಯ ಸರ್ಕಾರ ಮೋಡ ಬಿತ್ತನೆ ಕೈಗೊಳ್ಳುವ ವಿಚಾರವಾಗಿ ಹವಾಮಾನ ಇಲಾಖೆಯನ್ನು ಸಂಪರ್ಕಿಸಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿ: Karnataka Weather: ರಾಜ್ಯದ ಹಲವೆಡೆ ಇಂದು ಭಾರಿ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಕಳೆದ ವರ್ಷ ಇದೇ ಕಾವೇರಿ ಜಲಾನಯನ ಪ್ರದೇಶಗಳು, ಇತರ ಜಲಾನಯನ ಪ್ರದೇಶಗಳು ಮತ್ತು ಘಟ್ಟ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆ ಮತ್ತು ಪ್ರವಾಹ ಉಂಟಾಗಿತ್ತು ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಕಳೆದ ವರ್ಷ, ಮುಂಗಾರು ಪ್ರಾರಂಭವು ಮೇ 29ಕ್ಕೂ ಮುಂಚಿತವಾಗಿಯೇ ಆಗಿತ್ತು. ಆದರೆ, ಈ ವರ್ಷ ವಿಳಂಬವಾಗಿದೆ. ನಂತರವೂ ಭಾರೀ ಮಳೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಅಂಕಿಅಂಶಗಳ ಪ್ರಕಾರ, 13 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದೆ ಮತ್ತು 16 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:24 pm, Thu, 20 July 23