Karnataka Rains: ಕರ್ನಾಟಕದಲ್ಲಿ ಶೇ 23 ರಷ್ಟು ಮಳೆ ಕೊರತೆ; ಹವಾಮಾನ ಇಲಾಖೆ

ಜೂನ್ 1 ರಿಂದ ಜುಲೈ 19ರ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಶೇ 7 ಮತ್ತು ಬೆಂಗಳೂರು ನಗರದಲ್ಲಿ ಶೇ 17 ರಷ್ಟು ಅಧಿಕ ಮಳೆ ದಾಖಲಾಗಿದೆ.

Karnataka Rains: ಕರ್ನಾಟಕದಲ್ಲಿ ಶೇ 23 ರಷ್ಟು ಮಳೆ ಕೊರತೆ; ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ

Updated on: Jul 20, 2023 | 10:21 PM

ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ ಜೂನ್ 1 ರಿಂದ ಜುಲೈ 19 ರವರೆಗೆ 27.3 ಸೆಂ.ಮೀ ಮಳೆಯಾಗಿದೆ (Karnataka Rains). ಸಾಮಾನ್ಯವಾಗಿ ಈ ಅವಧಿಯಲ್ಲಿ 35.35 ಸೆಂ.ಮೀ ಮಳೆಯಾಗುತ್ತಿದೆ. ಈ ವರ್ಷ ಶೇ 23 ರಷ್ಟು ಮಳೆ ಕೊರತೆಯಾಗಿದೆ ಎಂಬುದು ಹವಾಮಾನ ಇಲಾಖೆಯ (IMD) ದತ್ತಾಂಶಗಳಿಂದ ತಿಳಿದುಬಂದಿದೆ. ಹವಾಮಾನ ಇಲಾಖೆಯ ದತ್ತಾಂಶಗಳ ಪ್ರಕಾರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಆದರೆ, ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಕೊರತೆ ವರದಿಯಾಗಿದ್ದು, ನಂತರದ ಸ್ಥಾನದಲ್ಲಿ ಹಾಸನ, ರಾಮನಗರ ಮತ್ತು ಶಿವಮೊಗ್ಗ ಮತ್ತು ಬಾಗಲಕೋಟೆ ಇವೆ.

ಜೂನ್ 1 ರಿಂದ ಜುಲೈ 19ರ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಶೇ 7 ಮತ್ತು ಬೆಂಗಳೂರು ನಗರದಲ್ಲಿ ಶೇ 17 ರಷ್ಟು ಅಧಿಕ ಮಳೆ ದಾಖಲಾಗಿದೆ.

ಕೆಲವು ಪ್ರದೇಶಗಳಲ್ಲಿ ಮಳೆಯ ಕೊರತೆಯನ್ನು ಗಮನಿಸಿರುವ ರಾಜ್ಯ ಸರ್ಕಾರ ಮೋಡ ಬಿತ್ತನೆ ಕೈಗೊಳ್ಳುವ ವಿಚಾರವಾಗಿ ಹವಾಮಾನ ಇಲಾಖೆಯನ್ನು ಸಂಪರ್ಕಿಸಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿ: Karnataka Weather: ರಾಜ್ಯದ ಹಲವೆಡೆ ಇಂದು ಭಾರಿ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಕಳೆದ ವರ್ಷ ಇದೇ ಕಾವೇರಿ ಜಲಾನಯನ ಪ್ರದೇಶಗಳು, ಇತರ ಜಲಾನಯನ ಪ್ರದೇಶಗಳು ಮತ್ತು ಘಟ್ಟ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆ ಮತ್ತು ಪ್ರವಾಹ ಉಂಟಾಗಿತ್ತು ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಕಳೆದ ವರ್ಷ, ಮುಂಗಾರು ಪ್ರಾರಂಭವು ಮೇ 29ಕ್ಕೂ ಮುಂಚಿತವಾಗಿಯೇ ಆಗಿತ್ತು. ಆದರೆ, ಈ ವರ್ಷ ವಿಳಂಬವಾಗಿದೆ. ನಂತರವೂ ಭಾರೀ ಮಳೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಅಂಕಿಅಂಶಗಳ ಪ್ರಕಾರ, 13 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದೆ ಮತ್ತು 16 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:24 pm, Thu, 20 July 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us