Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಮುಂದಿನ 6 ದಿನ ಭಾರೀ ಮಳೆ ಎಚ್ಚರಿಕೆ,ಕರಾವಳಿಗೆ ರೆಡ್ ಅಲರ್ಟ್
ರಾಜ್ಯದಲ್ಲಿ ನೈಋತ್ಯ ಮುಂಗಾರು (Monsoon 2026) ಚುರುಕುಗೊಂಡಿದ್ದು, ಮುಂದಿನ ಆರು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ 'ಅತಿ ಭಾರೀ ಮಳೆ'ಯಾಗುವ ಸಾಧ್ಯತೆ ಇದ್ದು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೆಂಗಳೂರು (ಜೂ.08): ಕರ್ನಾಟಕದಲ್ಲಿ ಮುಂಗಾರು (Karnataka Monsoon Rain) ಅಬ್ಬರ ಜೋರಾಗಿದ್ದು, ಇಂದಿನಿಂದ ಅಂದರೆ ಜೂನ್ 08ರಿಂದ ಜೂ.13ವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ (Karavali) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೇ ಜೂನ್ 10 ಮತ್ತು 11 ರಂದು ಕೂಡ ಭಾರೀ ಮಳೆ ಮುಂದುವರಿಯಲಿದ್ದು, ಇಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮತ್ತು ಸಮುದ್ರ ತೀರದ ನಿವಾಸಿಗಳು ಜಾಗರೂಕರಾಗಿರಲು ತಿಳಿಸಲಾಗಿದೆ.
ಮುಖ್ಯಾಂಶಗಳು
- ಕರ್ನಾಟಕದಲ್ಲಿ ಮುಂಗಾರು ಅಬ್ಬರ ಜೋರು
- ಜೂನ್ 08ರಿಂದ ಜೂ.13ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
- ಕರಾವಳಿ ದಕ್ಷಿನ ಒಳನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
- ಮೀನುಗಾರರು ಮತ್ತು ಸಮುದ್ರ ತೀರದ ನಿವಾಸಿಗಳು ಜಾಗರೂಕರಾಗಿರಲು ಸೂಚನೆ
ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 8ರಿಂದ 11ರವರೆಗೆ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ 8ರಿಂದ 10ರವರೆಗೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 8ರಿಂದ ಜೂನ್ 11ರವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Bengaluru Air Quality: ಬೆಂಗಳೂರಿನ ವಾಯು ಗುಣಮಟ್ಟ ಇಂದು ಉತ್ತಮ, ಉಡುಪಿಯ ಎಕ್ಯೂಐ ಎಲ್ಲದಕ್ಕಿಂತ ಬೆಸ್ಟ್!
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. #KSNDMC #ಎಚ್ಚರಿಕೆವಹಿಸಿ Next 5 days #SouthwestMonsoon #Rainfall #forecast maps for #Karnataka state with district-wise warnings. Source: @Indiametdept @KarnatakaVarthe #KarnataKaRains pic.twitter.com/ezYihwMMBi
— Karnataka State Natural Disaster Monitoring Centre (@KarnatakaSNDMC) June 8, 2026
ಉತ್ತರ ಮತ್ತು ದಕ್ಷಿಣ ಒಳನಾಡು
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲೂ ಜೂನ್ 14 ರವರೆಗೆ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.
#ಮಳೆ #ಮುನ್ನೆಚ್ಚರಿಕೆ : #Extremely #Heavy #Rainfall (>204.5mm) #warning for Coastal & South Interior #Karnataka #REDalert#Lightning #Thunderstorm #KSNDMC@KarnatakaVarthe #KarnatakaRains #SouthWestMonsoon #Monsoon2026 pic.twitter.com/suzrGWyzi5
— Karnataka State Natural Disaster Monitoring Centre (@KarnatakaSNDMC) June 8, 2026
ರೆಡ್ ಮತ್ತು ಆರೆಂಜ್ ಅಲರ್ಟ್ ಎಲ್ಲೆಲ್ಲಿ-ಯಾವಾಗ?
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 9 ರಂದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಧಿಕ (204.5mm) ಸಾಧ್ಯತೆ ಇದೆ. ಇದರಿಂದ IMD ಯಿಂದ #ರೆಡ್‌ಅಲರ್ಟ್ ನೀಡಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸಲು ಕೋರಿದೆ.
ಇನ್ನು ಜೂನ್ 10 ಮತ್ತು 11 ರಂದು ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 8 ರಿಂದ 10 ರವರೆಗೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 8 ರಿಂದ 11 ರವರೆಗೆ, ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ (64.5mm -115.4mm) (115.5mm-204.4mm) ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
#ಮಳೆ #ಮುನ್ನೆಚ್ಚರಿಕೆ : #Heavy to #very Heavy #Rainfall (64.5mm to 204.4mm) #warning for #Karnataka #Orange #alert @KarnatakaVarthe #KSNDMC#KarnatakaRains #SouthWestMonsoon #Monsoon2026@DCHaveri @DCRaichur @KodaguDC @DcDeoHassan @DEO_CHIKMAGALUR @DcDeoHassan pic.twitter.com/d4HYoVEccg
— Karnataka State Natural Disaster Monitoring Centre (@KarnatakaSNDMC) June 8, 2026
ಬೆಂಗಳೂರು ಹವಾಮಾನ ವರದಿ
ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ನಗರದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.




