AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದಾದ್ಯಂತ ಇಂದು ಕೂಡ ಮಳೆರಾಯನ ಆರ್ಭಟ; ಧಾರಾಕಾರ ಗಾಳೆ ಮಳೆಯಿಂದ ಹಲವೆಡೆ ಹಾನಿ

Bengaluru Rain: ನಗರದ ಹಲವೆಡೆ ಇಂದೂ ಮಳೆಯ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನರ ವೀಕೆಂಡ್ ಸುತ್ತಾಟಕ್ಕೆ ಬ್ರೇಕ್ ಬಿದಿದ್ದು,  ಟ್ರಾಫಿಕ್​ನಲ್ಲಿ ಸಿಲುಕಿ ವಾಹನ ಸವಾರರು ಪೇಚಾಡುತ್ತಿದ್ದಾರೆ.

Karnataka Rain: ಕರ್ನಾಟಕದಾದ್ಯಂತ ಇಂದು ಕೂಡ ಮಳೆರಾಯನ ಆರ್ಭಟ; ಧಾರಾಕಾರ ಗಾಳೆ ಮಳೆಯಿಂದ ಹಲವೆಡೆ ಹಾನಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 16, 2022 | 7:21 PM

Share

ಬೆಂಗಳೂರು: ನಗರದ ಹಲವೆಡೆ ಇಂದೂ ಮಳೆ (Rain) ಆರ್ಭಟ ಜೋರಾಗಿದೆ. ಸತತ ಮೂರು ದಿನಗಳಿಂದ ರಾಜಾಧಾನಿಯಲ್ಲಿ ಅಬ್ಬರಿಸುತ್ತಿರುವ ವರುಣಾ, ಕಬ್ಬನ್‌ಪಾರ್ಕ್, ರೇಸ್ ಕೋರ್ಸ್, ಮೆಜೆಸ್ಟಿಕ್, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಲಾಲ್​ಬಾಗ್, ಜಯನಗರ, ಕಾರ್ಪೋರೇಷನ್ , ವಿಲ್ಸನ್ ಗಾರ್ಡಾನ್ , ಶಾಂತಿನಗರ, ಕೋರಮಂಗಲ, ಶಿವಾನಂದ್ ಸರ್ಕಲ್ , ಒಕಲಿ ಪುರಂ‌ ಸೇರಿದಂತೆ ಹಲವೆಡೆ ಭಾರಿ ಮಳೆ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನರ ವೀಕೆಂಡ್ ಸುತ್ತಾಟಕ್ಕೆ ಬ್ರೇಕ್ ಬಿದಿದ್ದು,  ಟ್ರಾಫಿಕ್​ನಲ್ಲಿ ಸಿಲುಕಿ ವಾಹನ ಸವಾರರು ಪೇಚಾಡುತ್ತಿದ್ದಾರೆ. ಟ್ರಿನಿಟಿ ಸರ್ಕಲ್, ಎಮ್ ಜಿ ರಸ್ತೆ, ಮೆಜೆಸ್ಟಿಕ್, ಗಾಂಧಿನಗರ, ಜಯನಗರ, ಬಸವೇಶ್ವರ ವೃತ್ತ, ಶಿವಾನಂದ ಸರ್ಕಲ್, ವಸಂತ ನಗರ ಸುತ್ತಮುತ್ತ ಧಾರಾಕಾರ ಗಾಳಿ ಮಳೆ ಸುರಿಯುತ್ತಿದ್ದು, ರಾಜ್ಯದಲ್ಲಿ ಮುಂದಿನ ಎರಡು ದಿನವೂ ಭಾರೀ ಮಳೆ ಜತೆಗೆ ಗುಡುಗು ಹಾಗೂ ಸಿಡಿಲಿನ ಮುನ್ನೆಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ.

ಧರ್ಮರಾಯ ಸ್ವಾಮಿ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ದ್ರೌಪದಿ ಅಮ್ಮನ ಶಕ್ತ್ಯೋತ್ಸವಕ್ಕೆ ಕೊನೆ ಹಂತದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರಗ ಮಹೋತ್ಸವದ ಸಿದ್ಧತೆಗೆ ಮಳೆರಾಯ ಅಡ್ಡಿಯಾಗಿದೆ. ಈ ಬಾರಿ ಅದ್ದೂರಿ ಕರಗಕ್ಕೆ ಸಿದ್ಧತೆ ನಡೆದಿತ್ತಿರುವಾಗ್ಲೇ ವರುಣಾರ್ಭಟ ಶುರುವಾಗಿದೆ. ಶಿವಮೊಗ್ಗ ನಗರದಲ್ಲಿ ಧಾರಾಕಾರ ಗಾಳೆ ಮಳೆ ಹಿನ್ನಲೆ ಹೆಂಚಿನ ಮನೆಯ ಮೇಲೆ ತೆಂಗಿನ ಮರ ಮುರಿದು ಬಿದ್ದಿದೆ. ಮನೆಯಲ್ಲಿರುವ ಗೃಹಬಳಕೆ ವಸ್ತುಗಳಿಗೆ ಹಾನಿಯಾಗಿದೆ. ಗರದ ವಿವಿಧಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾವೇರಿಯಲ್ಲಿ ಮಳೆರಾಯನ ಆರ್ಭಟ ಶುರುವಾಗಿದ್ದು, ಗಾಳಿ, ಗುಡುಗಿನೊಂದಿಗೆ ಮಳೆರಾಯನ ಆಗಮನವಾಗಿದೆ. ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆರಾಯ. ಅರ್ಧ ಗಂಟೆಯಿಂದ ಗಾಳಿ, ಗುಡುಗಿನೊಂದಿಗೆ ಮಳೆರಾಯ ಆರ್ಭಟಿಸುತ್ತಿದ್ದಾನೆ.

ಗದಗ ಜಿಲ್ಲೆಯಲ್ಲೂ ಗುಡುಗು ಸಹಿತ ಹಲವಡೆ ಮಳೆಯಾಗಿದ್ದು, ಸಿಡಿಲು ಬಡಿದು ಮೂವರ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಎರಡು, ಮುಂಡರಗಿ ತಾಲೂಕಿನ ಓರ್ವರು ಮೃತಪಟ್ಟಿದ್ದಾರೆ. ಮುರುಗೇಶ್ ಹೊಸಮನಿ 44, ಬಾಬು ದೊಡ್ಡಮನಿ 55 ಹಾಗೂ ಹನಮಪ್ಪ ಮನ್ನಾಪುರ ಎನ್ನುವವರ ಸಾವಿಗೀಡಾದವರು.

ಇದನ್ನೂ ಓದಿ:

IPL 2022 DC vs RCB playing XI: RCB ತಂಡದಲ್ಲಿ ಒಂದು ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11

ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ 2 ಕೋಟಿ ರೂ. ಬಿಡುಗಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!