AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಮಳೆ

ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Rains: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಮಳೆ
ಮಳೆ
ನಯನಾ ರಾಜೀವ್
|

Updated on: May 19, 2023 | 7:25 AM

Share

ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನಾಪೋಕ್ಲು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ಉಳಿದೆಡೆ ಒಣಹವೆ ಇತ್ತು. ಕಲಬುರಗಿಯಲ್ಲಿ 40.7 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಎರಡು ದಿನ ಮಳೆ

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ ಅಬ್ಬರಿಸಲಿದೆ.

ಇದೇ ಕೆಲವು ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಆಗಾಗ ತುಂತುರು ಮಲೆ ಕಾಣಿಸಿಕೊಳ್ಳಲಿದೆ. ಕರಾವಳಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಮಳೆ ಬರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಬಿರು ಬಿಸಿಲಿನ ಧಗೆ ಹೆಚ್ಚಾಗಿದೆ. ವಾಡಿಕೆಗಿಂತ ಅಧಿಕ ತಾಪಮಾನ ದಾಖಲಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ ಮತ್ತು ಕೊಪ್ಪಳ್ಳ, ರಾಯಚೂರಿನಲ್ಲಿ ಗರಿಷ್ಠ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ