Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19ರಿಂದ 3 ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆ
ಮಳೆ
Follow us
|

Updated on:Nov 16, 2023 | 7:24 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19ರಿಂದ 3 ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಇಂದಿನಿಂದಲೇ ಮಳೆ ಆರಂಭವಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ದಾವಣಗೆರೆ ಹಾಗೂ ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಸಂಜೆ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಲೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ನವೆಂಬರ್ 19ರಿಂದ 3 ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಎಚ್​ಎಎಲ್​ನಲ್ಲಿ 24.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ, ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಒಡಿಶಾ ಕರಾವಳಿ, ಪಶ್ಚಿಮ ಬಂಗಾಳ, ಮಣಿಪುರ, ಮೇಘಾಲಯ, ಮಿಜೋರಾಂ, ತ್ರಿಪುರ ಸೇರಿದಮತೆ ಹಲವೆಡೆ ನವೆಂಬರ್ 17ರಂದು ಹೆಚ್ಚು ಮಳೆಯಾಗಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

Published On - 7:23 am, Thu, 16 November 23