Karnataka Weather Updates: ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿ.21 ರಿಂದ 2 ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ಮಳೆ(Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Updates: ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿ.21 ರಿಂದ 2 ದಿನಗಳ ಕಾಲ ಮಳೆ ಸಾಧ್ಯತೆ
Karnataka Weather
Follow us
| Updated By: ನಯನಾ ರಾಜೀವ್

Updated on: Dec 18, 2022 | 6:00 AM

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ಮಳೆ(Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಮಳೆಯಾಗಲಿದೆ. ಬಾಗಲಕೋಟೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ 5.8ಕಿಲೋ ಮೀಟರ್ ಎತ್ತರದ ಸುಳಿಗಾಳಿ ಕರ್ನಾಟಕ ಕರಾವಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ್ದರಿಂದ ಅದರ ಪ್ರಭಾವ ಉಂಟಾಗುವುದಿಲ್ಲ. ಈ ಕಾರಣಕ್ಕೆ ಗುರುವಾರ ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಬೀಳಲಿದೆ.

ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳ ಮಳೆ ಆಗಲಿದೆ. ಶುಕ್ರವಾರದಿಂದ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಳೆದ ಒಂದು ವಾರದಿಂದ ಚಂಡಮಾರುತದ ಪ್ರಭಾವದಿಂದ ರಾಜ್ಯದೆಲ್ಲಡೆ ಮಳೆ ಹೆಚ್ಚಾಗಿತ್ತು.

ಅದರಿಂದ ನಿರಂತರವಾಗಿ ಮಳೆ, ಚಳಿ ವಾತವರಣ ನಿರ್ಮಾಣವಾಗಿತ್ತು. ಇದರಿಂದ ಜನ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಚಳಿ, ಮೋಡ ಕವಿದ ವಾತಾವರಣ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ