ಕೊಡಗಿನಲ್ಲಿ ಇಂದೂ ಕೂಡಾ ಶಾಲಾ -ಕಾಲೇಜುಗಳಿಗೆ ರಜೆ; ಉಡುಪಿಯಲ್ಲಿ ಭಾರಿ ಮಳೆಯ ಎಚ್ಚರಿಕೆ

ಮಡಿಕೇರಿ ತಾಲೂಕಿನ ಕೊಯನಾಡು ಬಳಿ ಪಯಸ್ವಿನಿ ನದಿಗೆ ಕಟ್ಟಲಾಗಿರುವ ಕಿಂಡಿ ಅಣೆಕಟ್ಟಿನ ತಡೆಗೋಡೆಗೆ ಹಾನಿಯಾಗಿದ್ದು, ತಡೆಗೋಡೆ ಕುಸಿದು ಬೀಳುವ ಆತಂಕ ಶುರುವಾಗಿದೆ.

ಕೊಡಗಿನಲ್ಲಿ ಇಂದೂ ಕೂಡಾ ಶಾಲಾ -ಕಾಲೇಜುಗಳಿಗೆ ರಜೆ; ಉಡುಪಿಯಲ್ಲಿ ಭಾರಿ ಮಳೆಯ ಎಚ್ಚರಿಕೆ
ಕಿಂಡಿ ಅಣೆಕಟ್ಟಿನ ತಡೆಗೋಡೆಗೆ ಹಾನಿಯಾಗಿದೆ
Follow us
TV9 Web
| Updated By: sandhya thejappa

Updated on:Jul 09, 2022 | 8:44 AM

ಕೊಡಗು: ರಾಜ್ಯದಲ್ಲಿ ಹಲವೆಡೆ ಭಾರಿ ಮಳೆ (Heavy Rain) ಮುಂದುವರಿದಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಕೊಡಗಿನಾದ್ಯಂತ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಕೂಡಾ ಶಾಲಾ- ಕಾಲೇಜುಗಳಿಗೆ (Schools And Colleges) ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಡಿಸಿ ಡಾ ಬಿಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ಇನ್ನು ಮಡಿಕೇರಿ ತಾಲೂಕಿನ ಕೊಯನಾಡು ಬಳಿ ಪಯಸ್ವಿನಿ ನದಿಗೆ ಕಟ್ಟಲಾಗಿರುವ ಕಿಂಡಿ ಅಣೆಕಟ್ಟಿನ ತಡೆಗೋಡೆಗೆ ಹಾನಿಯಾಗಿದ್ದು, ತಡೆಗೋಡೆ ಕುಸಿದು ಬೀಳುವ ಆತಂಕ ಶುರುವಾಗಿದೆ.

ಉಡುಪಿಯಲ್ಲಿ ಇಂದು ಭಾರಿ ಮಳೆಯಾಗುವ ಎಚ್ಚರಿಕೆಯಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಜಿಲ್ಲಾಡಳಿತ ಈಗಾಗಲೇ ಶಾಲಾ-ಕಾಲೇಜಿಗೆ ರಜೆ ನೀಡಿದೆ. ಜಿಲ್ಲೆಯಲ್ಲಿ  ಕಳೆದ 1 ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.

ಇದನ್ನೂ ಓದಿ: ಸೀಟ್​​​ ಬೆಲ್ಟ್​​ ಧರಿಸದೆ ಸಿಕ್ಕಿಬಿದ್ದವ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಸಬ್​​ವೇ ಟ್ರ್ಯಾಕ್ ಮೇಲಿಂದ ಕಟ್ಟಡದ ಮೇಲೆ ಜಿಗಿದು ಕಾಲು ಮುರಿದುಕೊಂಡ!

ಇದನ್ನೂ ಓದಿ
Image
Shinzo Abe Death: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ; ಭಾರತದಲ್ಲಿ ಇಂದು ರಾಷ್ಟ್ರೀಯ ಶೋಕಾಚರಣೆ
Image
Karnataka Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9ರಷ್ಟು ಕಂಪನದ ತೀವ್ರತೆ ದಾಖಲು
Image
ಸೀಟ್​​​ ಬೆಲ್ಟ್​​ ಧರಿಸದೆ ಸಿಕ್ಕಿಬಿದ್ದವ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಸಬ್​​ವೇ ಟ್ರ್ಯಾಕ್ ಮೇಲಿಂದ ಕಟ್ಟಡದ ಮೇಲೆ ಜಿಗಿದು ಕಾಲು ಮುರಿದುಕೊಂಡ!
Image
Gold Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ

ಗುಡ್ಡ ಕುಸಿತ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕಾರವಾರ ನಗರ ಹೊರವಲಯದ ಬಿಣಗಾ ಬಳಿ ಗೋವಾ-ಮಹಾರಾಷ್ಟ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ಈ ಹಿನ್ನೆಲೆ  ಹಿನ್ನೆಲೆ ಸಂಚಾರ ಅಸ್ತವ್ಯಸ್ತವಾಗಿದೆ. ಸದ್ಯ ರಸ್ತೆಯಲ್ಲಿ ಬಿದ್ದ ಮಣ್ಣನ್ನು ಜಿಲ್ಲಾಡಳಿತ ತೆರವುಗೊಳಿಸುತ್ತಿದೆ.

ಕೆಆರ್‌ಎಸ್ ಡ್ಯಾಂ ಒಳ ಹರಿವು ಪ್ರಮಾಣ ಹೆಚ್ಚಳ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ಡ್ಯಾಂ ಭರ್ತಿಗೆ ಕೇವಲ 3 ಅಡಿ ಮಾತ್ರ ಬಾಕಿ ಇದೆ. ಇನ್ನೂ ಮೂರು ದಿನದಲ್ಲಿ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ  ಸದ್ಯ 121.42 ಅಡಿ ನೀರು ಭರ್ತಿಯಾಗಿದೆ. ಒಳ ಹರಿವಿನ ಪ್ರಮಾಣ 34.304 ಕ್ಯೂಸೆಕ್ ಇದ್ದರೆ, ಹೊರ ಹರಿವಿನ ಪ್ರಮಾಣ 3,307 ಕ್ಯೂಸೆಕ್ ಇದೆ.

ಇದನ್ನೂ ಓದಿ: Karnataka Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9ರಷ್ಟು ಕಂಪನದ ತೀವ್ರತೆ ದಾಖಲು

ಚಿಕ್ಕಮಗಳೂರಿನಲ್ಲಿ ಕಿರು ಸೇತುವೆ ಕುಸಿತ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಮಣಬೂರಿನಲ್ಲಿದ್ದ ಕಿರು ಸೇತುವೆ ಕುಸಿದಿದೆ. ರಸ್ತೆಗಳು ಕುಸಿಯುತ್ತಿರುವುದರಿಂದ ಜನಸಾಮಾನ್ಯರಲ್ಲಿ ಆತಂಕ ಮನೆಮಾಡಿದೆ. ಇನ್ನು ಕೊಪ್ಪ ತಾಲೂಕಿನ ಬಸರಿಕಟ್ಟೆಯ ಸಮೀಪ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿವೆ.

ಯಾದಗಿರಿಯಲ್ಲಿ ಪ್ರವಾಹ ಭೀತಿ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಯಾದಗಿರಿಯ ಕೃಷ್ಣಾ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಶುರುವಾಗಿದೆ. ಪ್ರವಾಹ ಮುನ್ಸೂಚನೆ ಹಿನ್ನೆಲೆ ಜಿಲ್ಲಾ ಪೊಲೀಸರು ಅಲರ್ಟ್ ಆಗಿದ್ದಾರೆ. ಪೊಲೀಸರು ನದಿ ಸುತ್ತಮುತ್ತ ಗ್ರಾಮಗಳಿಗೆ ಭೇಟಿ ನೀಡಿ, ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಸೂಚನೆ ನೀಡುತ್ತಿದ್ದಾರೆ.

ಪ್ರವಾಹದಿಂದ ಬೆಳೆ ನಾಶ: ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಜೋರಾಗಿದ್ದರಿಂದ ವರದಾ, ತುಂಗಭದ್ರಾ, ಕುಮುದ್ವತಿ ನದಿ ತುಂಬಿ ಹರಿಯುತ್ತಿವೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೇರೂರು ಗ್ರಾಮದ ಬಳಿ ನದಿಗಳ ಪ್ರವಾಹದಿಂದ ಮೆಕ್ಕೆಜೋಳ, ಕಬ್ಬು, ಚೆಂಡು ಹೂವಿನ ಬೆಳೆ ನಾಶವಾಗಿದೆ.

Published On - 8:22 am, Sat, 9 July 22

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್