Karnataka Weather: ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ
ಕರ್ನಾಟಕದಲ್ಲಿ ಚಳಿಗಾಲ ಆರಂಭವಾವಗಿದ್ದರೂ ಮಳೆಯೂ ಸಂಪೂರ್ಣವಾಗಿ ನಿಂತಿಲ್ಲ, ಮಧ್ಯಾಹ್ನ ಬಿಸಿಲಿನ ಕಾವು ಹೆಚ್ಚಿರುತ್ತೆ, ರಾತ್ರಿ ಮತ್ತು ಬೆಳಗ್ಗೆಯೂ ಸ್ವಲ್ಪ ಹೊತ್ತು ಚಳಿ ಮತ್ತೂ ಸ್ವಲ್ಪ ಹೊತ್ತು ಸೆಕೆ ವಾತಾವರಣವಿರುತ್ತಿದೆ. ಚಂಡಮಾರುತ ಪರಿಚಲನೆಯಿಂದಾಗಿ ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತ್ರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದೆ. ಶಿರಾಲಿಯಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಶುಕ್ರವಾರ ಬೆಳಗ್ಗೆಯಿಂದಲೇ ಮಳೆ ಜಿನುಗುತ್ತಿದೆ.
ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 28ರವರೆಗೆ ಮಳೆ
ಹೊನ್ನಾವರದಲ್ಲಿ32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.
ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿ ಭಾಗದಲ್ಲಿ ನಿರ್ಮಾಣವಾಗಿದ್ದ ಹವಾಮಾನ ವೈಪರಿತ್ಯವು ಕರಾವಳಿಯತ್ತ ಬಂದಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿದ್ದ ವಾಯುಭಾರ ಕುಸಿತವು ಚಂಡಮಾರುತ ಪರಿಚಲನೆಯಾಗಿ ಬದಲಾಗಿದೆ. ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡು ಕರಾವಳಿಯ ನೈಋತ್ಯ ಭಾಗದತ್ತ ಬಿರುಗಾಳಿ ಬೀಸುತ್ತಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ