ಪಶ್ಚಿಮಘಟ್ಟ ಸಾಲಿನಲ್ಲಿ ನಿಲ್ಲದ ಮಳೆ, ಉಕ್ಕಿ ಹರಿಯುತ್ತಿರುವ ಕೃಷ್ಣೆ, ಕುಡಚಿ-ಉಗಾರ ಸೇತುವೆ ಮುಳುಗಡೆ
ಕುಡಚಿಯಲ್ಲಿ ಸೇತುವೆ ಬಳಿ ಪೊಲೀಸರನ್ನು ಕಾವಲು ನಿಲ್ಲಿಸಲಾಗಿದೆ ಮತ್ತು ಬ್ಯಾರಿಕೇಡ್ಗಳನ್ನು ಅಡ್ಡ ನಿಲ್ಲಿಸಲಾಗಿದೆ. ನದಿ ಉಕ್ಕಿದಾಗ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದರೂ ವಾಹನ ಸವಾರರು ಅಪಾಯವನ್ನು ಲೆಕ್ಕಿಸದೆ ಸೇತುವೆ ದಾಟುವ ಪ್ರಯತ್ನ ಮಾಡುತ್ತಾರೆ, ಅಂಥ ಹುಚ್ಚು ಸಾಹಸಗಳಿಗೆ ಸವಾರರು ಮುಂದಾಗುವುದನ್ನು ತಡೆಯಲು ಪೊಲೀಸರನ್ನು ನಿಯೋಜಿಸಿ ಬ್ಯಾರಿಕೇಡ್ಗಳನ್ನು ಹಾಕುವುದು ಅನಿವಾರ್ಯವಾಗಿದೆ.
ಬೆಳಗಾವಿ, ಜುಲೈ 29: ಇದು ಬೆಳಗಾವಿ ಜಿಲ್ಲೆಯ ಕುಡಚಿ ಮತ್ತು ಮಹಾರಾಷ್ಟ್ರದ ನಡುವೆ ಕೃಷ್ಣಾನದಿಯ (River Krishna) ಮೇಲೆ ಕಟ್ಟಿರುವ ಸಂಪರ್ಕ ಸೇತುವೆ. ಮಹಾರಾಷ್ಟ್ರದ ಪಶ್ಚಿಮಘಟ್ಟಗಳ ಪ್ರದೇಶದಲ್ಲಿ ನಿರಂತವಾಗಿ ಮಳೆ ಸುರಿಯುತ್ತಿರುವುದರಿಂದ ಕೃಷ್ಣೆ ಉಕ್ಕಿ ಹರಿಯುತ್ತಿದ್ದಾಳೆ ಮತ್ತು ದೃಶ್ಯಗಳಲ್ಲಿ ಕಾಣುತ್ತಿರುವ ಹಾಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಸೇತುವೆಯು ಹೆದ್ದಾರಿಯ ಭಾಗವಾಗಿರುವುದರಿಂದ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಮತ್ತು ನೆರೆರಾಜ್ಯದಿಂದ ಕರ್ನಾಟಕಕ್ಕೆ ಬರುವ ವಾಹನಗಳು ಸೇತುವೆಯ ಎರಡೂ ಭಾಗಳಲ್ಲಿ ನಿಶ್ಚಲವಾಗಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಕರ್ನಾಟಕದ ಎಲ್ಲ ಭಾಗಗಳಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯಂತೆ ಬೇರೆ ನದಿಗಳೂ ಉಕ್ಕಿ ಹರಿಯುತ್ತಿವೆ.
ಇದನ್ನೂ ಓದಿ: ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ, ಭಾರೀ ವಾಹನಗಳ ಸಂಚಾರದ ಮೇಲೆ ನಿರ್ಬಂಧ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

