ಪಶ್ಚಿಮಘಟ್ಟ ಸಾಲಿನಲ್ಲಿ ನಿಲ್ಲದ ಮಳೆ, ಉಕ್ಕಿ ಹರಿಯುತ್ತಿರುವ ಕೃಷ್ಣೆ, ಕುಡಚಿ-ಉಗಾರ ಸೇತುವೆ ಮುಳುಗಡೆ

ಅರುಣ್​ ಕುಮಾರ್​ ಬೆಳ್ಳಿ

Updated on: Jul 29, 2025 | 12:21 PM

ಕುಡಚಿಯಲ್ಲಿ ಸೇತುವೆ ಬಳಿ ಪೊಲೀಸರನ್ನು ಕಾವಲು ನಿಲ್ಲಿಸಲಾಗಿದೆ ಮತ್ತು ಬ್ಯಾರಿಕೇಡ್​​ಗಳನ್ನು ಅಡ್ಡ ನಿಲ್ಲಿಸಲಾಗಿದೆ. ನದಿ ಉಕ್ಕಿದಾಗ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದರೂ ವಾಹನ ಸವಾರರು ಅಪಾಯವನ್ನು ಲೆಕ್ಕಿಸದೆ ಸೇತುವೆ ದಾಟುವ ಪ್ರಯತ್ನ ಮಾಡುತ್ತಾರೆ, ಅಂಥ ಹುಚ್ಚು ಸಾಹಸಗಳಿಗೆ ಸವಾರರು ಮುಂದಾಗುವುದನ್ನು ತಡೆಯಲು ಪೊಲೀಸರನ್ನು ನಿಯೋಜಿಸಿ ಬ್ಯಾರಿಕೇಡ್​ಗಳನ್ನು ಹಾಕುವುದು ಅನಿವಾರ್ಯವಾಗಿದೆ.

ಬೆಳಗಾವಿ, ಜುಲೈ 29: ಇದು ಬೆಳಗಾವಿ ಜಿಲ್ಲೆಯ ಕುಡಚಿ ಮತ್ತು ಮಹಾರಾಷ್ಟ್ರದ ನಡುವೆ ಕೃಷ್ಣಾನದಿಯ (River Krishna) ಮೇಲೆ ಕಟ್ಟಿರುವ ಸಂಪರ್ಕ ಸೇತುವೆ. ಮಹಾರಾಷ್ಟ್ರದ ಪಶ್ಚಿಮಘಟ್ಟಗಳ ಪ್ರದೇಶದಲ್ಲಿ ನಿರಂತವಾಗಿ ಮಳೆ ಸುರಿಯುತ್ತಿರುವುದರಿಂದ ಕೃಷ್ಣೆ ಉಕ್ಕಿ ಹರಿಯುತ್ತಿದ್ದಾಳೆ ಮತ್ತು ದೃಶ್ಯಗಳಲ್ಲಿ ಕಾಣುತ್ತಿರುವ ಹಾಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಸೇತುವೆಯು ಹೆದ್ದಾರಿಯ ಭಾಗವಾಗಿರುವುದರಿಂದ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಮತ್ತು ನೆರೆರಾಜ್ಯದಿಂದ ಕರ್ನಾಟಕಕ್ಕೆ ಬರುವ ವಾಹನಗಳು ಸೇತುವೆಯ ಎರಡೂ ಭಾಗಳಲ್ಲಿ ನಿಶ್ಚಲವಾಗಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಕರ್ನಾಟಕದ ಎಲ್ಲ ಭಾಗಗಳಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯಂತೆ ಬೇರೆ ನದಿಗಳೂ ಉಕ್ಕಿ ಹರಿಯುತ್ತಿವೆ.

ಇದನ್ನೂ ಓದಿ:   ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ, ಭಾರೀ ವಾಹನಗಳ ಸಂಚಾರದ ಮೇಲೆ ನಿರ್ಬಂಧ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.