Bengaluru Rains: ಮೊದಲ ಶ್ರಾವಣ ಸೋಮವಾರದಂದು ಬೆಂಗಳೂರಿನಲ್ಲಿ ಭಾರೀ ಮಳೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 05, 2024 | 6:16 PM

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಇನ್ನು ಬೆಂಗಳೂರಿನಲ್ಲಿ ಆಗಾಗ ತುಂತೂರು ಮಳೆಯಾಗುವುದು ಬಿಟ್ಟರೆ ಕೇವಲ ಮೋಡ ಕವಿದ ವಾತಾವರಣ ಇರುತ್ತಿತ್ತು. ಆದರೆ ಇಂದು (ಆಗಸ್ಟ್​ 05) ಮೊದಲ ಶ್ರಾವಣ ಸೋಮವಾರದಂದು ಸಂಜೆ ವೇಳೆಗೆ ಸಿಲಿಕಾನ್​ ಸಿಟಿಯಲ್ಲಿ ವರುಣ ಆರ್ಭಟಿಸಿದ್ದಾನೆ.

Bengaluru Rains: ಮೊದಲ ಶ್ರಾವಣ ಸೋಮವಾರದಂದು ಬೆಂಗಳೂರಿನಲ್ಲಿ ಭಾರೀ ಮಳೆ
ಮಳೆ
Follow us on

ಬೆಂಗಳೂರು, ಆಗಸ್ಟ್​ 05: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ (Rain) ಆಗುತ್ತಿದೆ. ಹಾಗಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಎದುರಾಗಿದೆ. ಇತ್ತ ಬೆಂಗಳೂರಿನಲ್ಲಿ (Bengaluru) ಮಾತ್ರ ಕೇವಲ ಮೋಡ ಕವಿದ ವಾತಾವರಣ ಇರುತ್ತಿತ್ತು. ಆದರೆ ಇಂದು ಮೊದಲ ಶ್ರಾವಣ ಸೋಮವಾರದಂದು ಸಂಜೆ ವೇಳೆಗೆ ಸಿಲಿಕಾನ್​ ಸಿಟಿಯಲ್ಲಿ ಮಳೆರಾಯ ಆರ್ಭಟಿಸಿದ್ದಾನೆ.

ಎಲ್ಲೆಲ್ಲಿ ಮಳೆ

ಸುಬ್ರಹ್ಮಣ್ಯಪುರ, ಕತ್ರಿಗುಪ್ಪೆ, ಉತ್ತರಹಳ್ಳಿ, ಶಾಂತಿನಗರ, ರಿಚ್​ಮಂಡ್ ಟೌನ್​, ಹೆಚ್​ಎಎಲ್, ದೊಡ್ಡ ನಕ್ಕುಂದಿ ಮಾರತಹಳ್ಳಿ, ಕುಂದ್ಲಹಳ್ಳಿ, ಇಂದಿರಾನಗರ, ಮುರುಗೇಶ್ ಪಾಳ್ಯ, ಸಿವಿ ರಾಮನ್ ನಗರ, ಈಜಿಪುರ, ದೊಮ್ಮಲೂರು, ಶಾಂತಿ ನಗರ, ಜಯನಗರ, ವಿಜಯನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಬನಶಂಕರಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ.

ಇನ್ನು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಮಳೆಯಿಂದಾಗಿ ಪರದಾಡುವಂತಾಗಿದ್ದು, ಹಿಡಿಶಾಪ ಹಾಕಿದ್ದಾರೆ. ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಇದನ್ನೂ ಓದಿ: ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ: 1.20 ಲಕ್ಷ ರೂ ಜತೆ ಹೊಸ ಮನೆ ನಿರ್ಮಿಸಿಕೊಡುವುದಾಗಿ ಸಿಎಂ ಭರವಸೆ

ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರಕ್ಕೆ ರಿಚ್ ಮಂಡ್ ಟೌನ್ ರಸ್ತೆಗಳು ಜಲಾವೃತವಾಗಿವೆ. ಅಲೆಕ್ಸಾಂಡ್ರಿಯಾ ಸ್ಟ್ರೀಟ್​ನಲ್ಲಿ ಮಳೆ ನೀರು ತುಂಬಿಕೊಂಡಿದ್ದು, ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುತ್ತಿದ್ದಾರೆ. ಮತ್ತೆ ಕೆಲ ಜನರು ಮಳೆಯಿಂದಾಗಿ ಅಂಗಡಿಗಳ ಬಳಿ ನಿಂತು ಆಶ್ರಯ ಪಡೆದುಕೊಂಡಿದ್ದಾರೆ.

ಕಾರ್ಪೊರೇಷನ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನ ಸೌಧ ಸುತ್ತಮುತ್ತ ಕೂಡ ಮಳೆ ಆರಂಭವಾಗಿದ್ದು,
ಕಾರ್ಪೊರೇಷನ್ ಟು ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಮಳೆಯಲ್ಲೇ ದ್ವಿಚಕ್ರ ವಾಹನ ಸವಾರರು ನೆನೆದುಕೊಂಡು ಹೋಗುತ್ತಿದ್ದಾರೆ.

ಕರಾವಳಿ ಸಮುದ್ರ ತೀರದಲ್ಲಿ ಗಾಳಿ ಪರಿವರ್ತನೆ ಹಿನ್ನಲೆ ಆಗಸ್ಟ್​​ 6ರ ವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಈ ಮುಂಚೆ ಮುನ್ಸೂಚನೆ ನೀಡಿದ್ದರು.

ಇದನ್ನೂ ಓದಿ: ಡ್ರೋಣ್​ನಲ್ಲಿ ಜೋಗ ಜಲಪಾತದ ರಮಣೀಯ ದೃಶ್ಯ…ಜೋಗದ ಸಿರಿ ಸೊಬಗನ್ನು ಕಣ್ತುಂಬಿಕೊಳ್ಳಿ

ಜೂನ್ 1 ರಿಂದ ಜುಲೈ 31ರ ವರೆಗೆ ರಾಜ್ಯಾದ್ಯಂತ ಶೇಕಡ 29 ರಷ್ಟು ಹೆಚ್ಚುವರಿ ಮಳೆಯಾಗಿದೆ. ಕರಾವಳಿಯಲ್ಲಿ 29%, ಉತ್ತರ ಒಳನಾಡು 23, ಹಾಗೂ ದಕ್ಷಿಣ ಒಳನಾಡು 32% ಹೆಚ್ಚುವರಿ ಮಳೆ ಆಗಿದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:48 pm, Mon, 5 August 24